ಮೈಸೂರು

ಪಿರಿಯಾಪಟ್ಟಣ ಪೊಲೀಸರ ಕಾರ್ಯಾಚರಣೆ : ನಾಲ್ವರು ಕಳ್ಳರ ಬಂಧನ ; ಎಂಟು ಮೇಕೆ ವಶ

ಮೈಸೂರು,ಆ.3:- ಪಿರಿಯಾಪಟ್ಟಣ ಠಾಣೆ ಪೊಲೀಸರು ಗೂಡ್ಸ್ ಆಟೋದಲ್ಲಿ ಸಾಗಿಸುತ್ತಿದ್ದ  ಎಂಟು ಮೇಕೆಗಳನ್ನು ವಶಪಡಿಸಿಕೊಂಡು ನಾಲ್ವರು ಕಳ್ಳರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ಶಿವಣ್ಣ, ಗೋಣಿಕೊಪ್ಪದ ವಿನೋದ್, ಮುತ್ತ ಹಾಗೂ ಕಿರಣ್ ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾಗ ಕನ್ನಂಬಾಡಿಯಮ್ಮ ದೇವಾಲಯದ ಬಳಿ ಗೂಡ್ಸ್ ಆಟೋದಲ್ಲಿ ಮೇಕೆಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಅನುಮಾನಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದರು.
ವಿಚಾರಣೆ ವೇಳೆ ಆರೋಪಿಗಳು ಕೊಡಗು ಜಿಲ್ಲೆಯ ಗೋಣಿಕೊಪ್ಪದಿಂದ ಮೇಕೆಗಳನ್ನು ಕದ್ದು ಹುಣಸೂರು ಕಡೆಗೆ ಕೊಂಡೊಯ್ಯುತ್ತಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ನಂತರ ಮೇಕೆಗಳನ್ನು ಪೊಲೀಸರು ಮಾಲೀಕರಿಗೆ ಹಿಂದಿರುಗಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಪಿಎಸ್‌ಐ ಗಣೇಶ್, ಸಿಬ್ಬಂದಿ ಮಂಜುನಾಥ್, ಅಸ್ಲಾಂ, ಸತೀಶ್, ಕುಮಾರಸ್ವಾಮಿ ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: