ಮೈಸೂರು

ಮನಿ ಹ್ಯಾಕರ್ಸ್ ಗಳ ಬಂಧನ : 2ಸಾವಿರಕ್ಕೂ ಅಧಿಕ ಸಿಮ್ ಕಾರ್ಡ್ ವಶ

ಮೈಸೂರು,ಆ.3:- ವಿಜಯನಗರದಲ್ಲಿನ ಮನೆಯೊಂದರ ಮೇಲೆ  ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಮನಿ ಹ್ಯಾಕರ್ಸ್ ಗಳನ್ನು ಬಂಧಿಸುವಲ್ಲಿ  ಯಶಸ್ವಿಯಾಗಿದ್ದಾರೆ.

ವಿಜಯನಗರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಸುರೇಶ್ ಕುಮಾರ್ ಮತ್ತು ಸಿಬ್ಬಂದಿಗಳು ದಾಳಿ ವಿಜಯ ನಗರದ ಮನೆಯೊಂದರ ಮೇಲೆ ದಾಳಿ ನಡೆಸಿ ಅಲ್ಲಿದ್ದವರನ್ನು ವಿಚಾರಿಸಿದಾಗ ,ಆಲನಹಳ್ಳಿ ಠಾಣಾ ವ್ಯಾಪ್ತಿಯ ಪೊಲೀಸ್ ಲೇ ಔಟ್ ನಲ್ಲಿನ ಮನೆಯೊಂದರಲ್ಲಿಯೂ ಮನಿ ಹ್ಯಾಕರ್ಸ್ ಗಳಿದ್ದಾರೆ ಎಂದು ಬಾಯ್ಬಿಟ್ಟಿದ್ದು ಅಲ್ಲಿಯೂ ದಾಳಿ ನಡೆಸಿ ಅಲ್ಲಿದ್ದವರನ್ನು ವಶಕ್ಕೆ ಪಡೆದಿದ್ದಾರೆ.  ನಾಲ್ಕಕ್ಕಿಂತ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ ಎನ್ನಲಾಗಿದ್ದು, ಕಳೆದ ಆರೇಳು ತಿಂಗಳಿನಿಂದ  ಅವ್ಯಾಹತವಾಗಿ ಮನಿ ಹ್ಯಾಕ್ ದಂದೆ ನಡೆಸುತ್ತಿದ್ದರು ಎನ್ನಲಾಗಿದೆ. ಬಂಧಿತರಿಂದ 2000ಕ್ಕೂ ಹೆಚ್ಚು ಸಿಮ್ ಕಾರ್ಡ್ ಗಳು, 25ಕ್ಕೂ ಅಧಿಕ ಮೊಬೈಲ್, ಲ್ಯಾಪ್ ಟಾಪ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ಕೇರಳ ಮೂಲದವರು ಎನ್ನಲಾಗಿದೆ. ಇವರು ಮೊಬೈಲ್ ಗಳಿಗೆ ಸಂದೇಶ ಕಳುಹಿಸಿ ಮಾಹಿತಿ ಸಂಗ್ರಹಿಸಿ ಅಕೌಂಟ್ ನಿಂದ ಹಣ ದೋಚುತ್ತಿದ್ದರು ಎನ್ನಲಾಗಿದೆ.

ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಅವರು ಬಂಧಿತರನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: