ಕರ್ನಾಟಕ

ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯ : ಅರ್ಜಿ ಅಹ್ವಾನ

ಮಂಡ್ಯ (ಆ.5): ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2019-20ನೇ ಸಾಲಿನಲ್ಲಿ “ಉದ್ಯೋಗಿನಿ ಯೋಜನೆಯಡಿ” ಆರ್ಥಿಕವಾಗಿ ಹಿಂದುಳಿದ ನಿರುದ್ಯೋಗಿ ಮಹಿಳೆಯರು ವ್ಯಾಪಾರ/ಉದ್ಯಮ ಆರಂಭಿಸಿ ಸ್ವಯಂ ಉದ್ಯೋಗಿಗಳಾಗಲು ರಾಷ್ಟ್ರೀಕೃತ ಬ್ಯಾಂಕ್‍ಗಳ ಮೂಲಕ ರೂ.1.00ಲಕ್ಷದಿಂದ ರೂ.3.00ಲಕ್ಷಗಳವರೆಗೆ ಸಾಲ ಸೌಲಭ್ಯ ಮತ್ತು ನಿಗಮದಿಂದ ಸಹಾಯಧನ ಒದಗಿಸಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು 18ರಿಂದ 55ವರ್ಷಗಳ ವಯೋಮಿತಿಯವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ರೂ.2.00 ಲಕ್ಷಗಳು ಹಾಗೂ ವಿಶೇಷ ವರ್ಗ ಮತ್ತು ಸಾಮಾನ್ಯ ವರ್ಗದ ಮಹಿಳೆಯರಿಗೆ ವಾರ್ಷಿಕ ಆದಾಯ ರೂ.1.50 ಲಕ್ಷಗಳಿಗೆ ಮೀರಿರಬಾರದು. ನೂತನವಾಗಿ ಸ್ಥಾಪಿಸುವ ಘಟಕಗಳಿಗೆ ಮಾತ್ರ ಆರ್ಥಿಕ ಸಹಾಯ ಒದಗಿಸಲಾಗುತ್ತದೆ. ಅರ್ಜಿ ಸಲ್ಲಿಸುವ ಅರ್ಹ ಮಹಿಳೆಯರು ತಮ್ಮ ಸೇವಾ ವ್ಯಾಪ್ತಿಯ ಬ್ಯಾಂಕಿನ ವ್ಯವಸ್ಥಾಪಕರಿಂದ, ಯಾವುದೇ ಸಾಲ ಬಾಕಿ ಇಲ್ಲ ಎಂಬುದನ್ನು ದೃಢೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಬೇಕು.

ಅರ್ಜಿಗಳನ್ನು ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗಳಿಗೆ ಆಗಸ್ಟ್ 28 ರೊಳಗೆ ತ್ರಿ ಪ್ರತಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರ ಕಛೇರಿ, ಮತ್ತು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

error: