ಪ್ರಮುಖ ಸುದ್ದಿ

ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ : ಡಾ. ಎಂ.ವಿ. ವೆಂಕಟೇಶ್‌ ಮಂಡ್ಯ ನೂತನ ಜಿಲ್ಲಾಧಿಕಾರಿ

ರಾಜ್ಯ(ಮಂಡ್ಯ)ಆ.6:-  ಇಬ್ಬರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ನಿನ್ನೆ ಆದೇಶ ಹೊರಡಿಸಿದೆ. ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಅವರನ್ನು ವರ್ಗಾವಣೆ ಮಾಡಿ ಡಾ. ಎಂ.ವಿ. ವೆಂಕಟೇಶ್‌ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ಬಿಡಿಎ ಆಯುಕ್ತರಾಗಿದ್ದ ಡಾ. ಎನ್‌.ಮಂಜುಳಾ ಅವರನ್ನು ವರ್ಗಾವಣೆ ಮಾಡಿ ಡಾ.ಜಿ.ಸಿ.ಪ್ರಕಾಶ್‌ ಅವರನ್ನು ಬಿಡಿಎ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ರಾಜ್ಯ ಸಹಕಾರ ವಸತಿ ಮಹಾಮಂಡಲದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಬಿ.ಸಿ.ಸತೀಶ್‌ ಅವರನ್ನು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: