ಮೈಸೂರು

ಪ್ರತಿಯೊಬ್ಬರೂ ಕಾನೂನನ್ನು ಅರ್ಥ ಮಾಡಿಕೊಳ್ಳಬೇಕು : ಡಿ.ರಂದೀಪ್

ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಹಕ್ಕುಗಳು ಹಾಗೂ ಕಾಯ್ದೆಗಳ ಬಗ್ಗೆ ಎರಡು ದಿನಗಳ ತರಬೇತಿ ಕಾರ್ಯಕ್ರಮವನ್ನು  ಜಿಲ್ಲಾಧಿಕಾರಿ ಡಿ.ರಂದೀಪ್  ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಪ್ರತಿಯೊಬ್ಬರೂ ಕಾನೂನನ್ನು ಅರ್ಥ ಮಾಡಿಕೊಂಡು ನಮ್ಮ ಮಕ್ಕಳನ್ನು ರಕ್ಷಿಸಲು ಸುರಕ್ಷಿತ ವಾತಾವರಣ ನಿರ್ಮಿಸಬೇಕು ಎಂದರು. ಪೋಸ್ಕೋ ಕಾಯ್ದೆ ಜಾರಿಗೆ ಬಂದಮೇಲೆ ಯಾವುದೇ ರೀತಿಯ ದೌರ್ಜನ್ಯ ನಡೆದರು ವಿಚಾರಣೆ ನಡೆಸುವ ಸಂದರ್ಭದಲ್ಲಿ ಮಗುವಿನ ಹೆಸರನ್ನು ಮತ್ತು ಗುರುತು ಎಲ್ಲಿಯೂ ಹೊರಬರದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತಿದೆ. ಪೊಲೀಸ್ ಅಧಿಕಾರಿಗಳ ಜೊತೆಯಲ್ಲಿ ಸರಕಾರೇತರ ಸಂಸ್ಥೆಯ ಕಾರ್ಯಕರ್ತರು ಹೆಚ್ಚಿನ ತರಬೇತಿ ಪಡೆದರೆ ಕಾಯ್ದೆ ಉತ್ತಮವಾಗಿ ಜಾರಿಗೆ ಬರಲಿದೆ. ಪ್ರತಿಯೊಬ್ಬರು ಕಾಯ್ದೆಯ ಪ್ರಾಮುಖ್ಯತೆಯನ್ನು ಅರಿಬೇಕು. ಮಕ್ಕಳಿಗೆ ಒಳ್ಳೆಯ ಹಾಗು ಕೆಟ್ಟ ಸ್ಪರ್ಶಗಳ ಬಗ್ಗೆ ತಿಳುವಳಿಕೆ ನೀಡಿ ತಪ್ಪು ಎಂದೆನಿಸಿದರೆ ಏನು ಮಾಡಬೇಕು ಎಂಬುದನ್ನು ಹೇಳಿಕೊಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕು ಕೆ.ರಾಧಾ,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಪದ್ಮಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆರ್.ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: