ಪ್ರಮುಖ ಸುದ್ದಿ

ಆಗಸ್ಟ್ 9 ರಂದು ರಾಜ್ಯದ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ : ಮೊದಲ ಹಂತದಲ್ಲಿ 15 ಮಂದಿಗೆ ಸಚಿವ ಸ್ಥಾನ ?

ರಾಜ್ಯ(ಬೆಂಗಳೂರು)ಆ.7:- ಆಗಸ್ಟ್ 9 ರಂದು ರಾಜ್ಯದ ಸಚಿವ ಸಂಪುಟ ವಿಸ್ತರಣೆಯಾಗುವ  ಸಾಧ್ಯತೆಯಿದೆ ಎನ್ನಲಾಗಿದೆ.

ವರಮಹಾಲಕ್ಷ್ಮೀ ಹಬ್ಬದಂದು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಕುರಿತು ಪ್ರಧಾನಿ ಮೋದಿ ಜೊತೆ ಸಿಎಂ ಯಡಿಯೂರಪ್ಪ ಚರ್ಚಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದ್ದು, ಮೊದಲ ಹಂತದಲ್ಲಿ 15 ಮಂದಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದ್ದು, ಆರ್.ಅಶೋಕ್, ಸುರೇಶ್‌ಕುಮಾರ್, ಅರವಿಂದ ಲಿಂಬಾವಳಿ, ಜೆ.ಸಿ.ಮಾಧುಸ್ವಾಮಿ, ಬಿ.ಶ್ರೀರಾಮುಲು, ಜಗದೀಶ್ ಶೆಟ್ಟರ್,ಬಾಲಚಂದ್ರ ಜಾರಕಿಹೊಳಿ, ಗೋವಿಂದ ಕಾರಜೋಳ, ಸಿ.ಟಿ.ರವಿ ,ಬಸವರಾಜ್ ಬೊಮ್ಮಾಯಿ, ಕೆ.ಎಸ್.ಈಶ್ವರಪ್ಪ, ಕೆ.ಜಿ.ಬೋಪಯ್ಯ ,ರಾಮದಾಸ್ ಸೇರಿ 15 ಮಂದಿ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸುವ  ಸಾಧ್ಯತೆ ಇದೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: