ಪ್ರಮುಖ ಸುದ್ದಿ

ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ : 5ಸಾವಿರ ಕ್ಯೂಸೆಕ್ ನೀರು ಹೊರಕ್ಕೆ

ರಾಜ್ಯ(ಮಡಿಕೇರಿ)ಆ.8:- ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದೆ. ಹೀಗಾಗಿ ಜಲಾಶಯ ಭರ್ತಿಯಾಗುವ ಮುನ್ನವೇ ನದಿಗೆ 5 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ.

ಗುರುವಾರ ಮುಂಜಾನೆ ಹೊತ್ತಿಗೆ 17 ಸಾವಿರ ಕ್ಯೂಸೆಕ್ ಒಳಹರಿವು ಇತ್ತು. ಇದರಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ, ತುರ್ತಾಗಿ ನದಿಗೆ ನೀರು ಹರಿಯ ಬಿಡಲಾಗುತ್ತಿದೆ. ಕಳೆದ ವರ್ಷ ಏಕಾಏಕೀ 80 ಸಾವಿರ ಕ್ಯೂಸೆಕ್ ನೀರು ಹೊರಬಿಟ್ಟಿದ್ದರಿಂದ ಕುಶಾಲನಗರದಲ್ಲಿ ಹಲವು ಪಟ್ಟಣಗಳು ಮುಳುಗಡೆ ಆಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಲಾಶಯದ ಗರಿಷ್ಠ ಮಟ್ಟ 2,859 ಅಡಿ ಆಗಿದೆ.   ಜಲಾಶಯದಲ್ಲಿ 2,850 ಅಡಿ ನೀರು ಸಂಗ್ರಹವಾಗಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಹೆಚ್ಚಿನ ಒಳಹರಿವು ಬಂದು ಜಲಾಶಯ ಭರ್ತಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯಾವ ಮುನ್ಸೂಚನೆ ನೀಡದೆ ಜಲಾಶಯದಿಂದ ನೀರು ಬಿಡಲಾಗುತ್ತಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: