ಮೈಸೂರು

ಕಬಿನಿ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ : ನಂಜನಗೂಡು- ಊಟಿ ರಸ್ತೆ ಸಂಪರ್ಕ ಕಡಿತ

ಮೈಸೂರು,ಆ.9:- ಕಬಿನಿ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ ನಂಜನಗೂಡು- ಊಟಿ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಕಬಿನಿ ಜಲಾಶಯದಿಂದ ಕಪಿಲಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದ್ದು ಈ ಹಿನ್ನೆಲೆಯಲ್ಲಿ ನಂಜನಗೂಡಿನ ಮಲ್ಲನಮೂಲೆ ಬಳಿ  ರಾಷ್ಟ್ರೀಯ ಹೆದ್ದಾರಿ 266ರಲ್ಲಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ಹೀಗಾಗಿ ನಂಜನಗೂಡು- ಊಟಿ ರಸ್ತೆ ಸಂಚಾರ ಬಂದ್ ಆಗಿದೆ.

ರಸ್ತೆ ಬಳಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಭದ್ರತೆ ಕಲ್ಪಿಸಿದ್ದಾರೆ. ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ರಾಜ್ಯದ ಜನತೆ ತತ್ತರಿಸಿದ್ದಾರೆ.  ಉತ್ತರಕರ್ನಾಟಕದ ಹಲವು ಜಿಲ್ಲೆಗಳ ಗ್ರಾಮಗಳು ಪ್ರವಾಹದಿಂದಾಗಿ ಮುಳುಗಿ ಹೋಗಿವೆ. ಇಲ್ಲಿನ ಜನರನ್ನ ಸುರಕ್ಷಿತ ಸ್ಥಳದತ್ತ ರವಾನಿಸುವ ಕಾರ್ಯ ನಡೆಯುತ್ತಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: