ಮೈಸೂರು

ಪ್ರಥಮ ಜಿಲ್ಲಾ ಸಮಾವೇಶ : ಫೆ.19 ರಂದು

ಸಮದೃಷ್ಟಿ ಕ್ಷಮತಾ ವಿಕಾಸ ಮತ್ತು ಅನುಸಂಧಾನ ಮಂಡಲ, ವಿಶೇಷ ಚೇತನರ ಸಬಲೀಕರಣಕ್ಕಾಗಿ ಸಮರ್ಪಿತ ರಾಷ್ಟ್ರೀಯ ಸಂಘಟನೆ ಮೈಸೂರು ಜಿಲ್ಲಾ ಘಟಕ ವತಿಯಿಂದ ಫೆ.19 ರಂದು ನಾದಬ್ರಹ್ಮ ಸಂಗೀತ ಸಭಾದಲ್ಲಿ ಪ್ರಥಮ ಜಿಲ್ಲಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಕ್ಷಮ ಸಂಸ್ಥೆಯ ಪ್ರಾಂತ ಸಂಯೋಜಕ ಜಯರಾಮ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅಂದು ಬೆಳಿಗ್ಗೆ 10 ಗಂಟೆಗೆ ನಾದಬ್ರಹ್ಮ ಸಂಗೀತ ಸಭಾದಿಂದ ಐಕ್ಯತಾ ನಡಿಗೆ ಇದ್ದು, ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚೆನ್ನಣ್ಣವರ್ ಅವರು ಚಾಲನೆ ನೀಡಲಿದ್ದಾರೆ. ಯೋಗಾನರಸಿಂಹಸ್ವಾಮಿ ದೇವಸ್ಥಾನದ ಅಧ್ಯಕ್ಷರಾದ ಭಾಷ್ಯಂ ಸ್ವಾಮೀಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 10.30 ಕ್ಕೆ ಉದ್ಘಾಟನಾ ಸಮಾರಂಭವಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಕೆ.ರಾಧಾ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಕ್ಷಮ ಜಿಲ್ಲಾ ಸಮಿತಿಯ ಪದಾಧಿಕಾರಿಗಳಾದ ಚಂದ್ರಶೇಖರ್, ಭರತ್, ಉದಯ್ ಕಿರಣ್ ಹಾಜರಿದ್ದರು.

Leave a Reply

comments

Related Articles

error: