ಮೈಸೂರು

ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ: ಫೆ.19 ರಂದು

ಕರ್ನಾಟಕ ರಾಜ್ಯ ಅರಸು ಮಹಾಸಭಾ ವತಿಯಿಂದ  ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ 64 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯರಾಜೇ ಅರಸ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಫೆ.19 ರಂದು ಬೆಳಿಗ್ಗೆ 9 ಗಂಟೆಗೆ ಮಹಾರಾಜ ಕಾಲೇಜು ಪೆವಿಲಿಯನ್ ಮೈದಾನದಲ್ಲಿ ಕಾರ್ಯಕ್ರಮವು ನಡೆಯಲಿದ್ದು, ಶಾಸಕ ಎಂ.ಕೆ.ಸೋಮಶೇಖರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಫೆ.20 ರಂದು ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭವಿದ್ದು, ಮೇಯರ್ ಎಂ.ಜೆ.ರವಿಕುಮಾರ್ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಅಲ್ಲದೇ ಫೆ.18 ರಂದು ಸಂಜೆ 6 ಗಂಟೆಗೆ ಕಲಾಮಂದಿರದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜೀವನ ಚರಿತ್ರೆ ಕುರಿತಾದ ಪ್ರಜಾರಾಜ ನಾಟಕದ ಪ್ರದರ್ಶನವಿರುತ್ತದೆ ಎಂದರು.

ಪಂದ್ಯಾವಳಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿದ್ದು, ಮೊದಲ ಬಹುಮಾನ 30 ಸಾವಿರ ರೂ. ನಗದು ಮತ್ತು ಟ್ರೋಫಿ ಹಾಗೂ 2 ನೇ ಬಹುಮಾನ 15 ಸಾವಿರ ರೂ. ನಗದು ಮತ್ತು ಟ್ರೋಫಿ ಇರುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪದಾಧಿಕಾರಿಗಳಾದ ಮಹೇಶ್ ಅರಸ್, ಸೋಸಲೆ ಸಿದ್ಧರಾಜು, ಜಿ.ಅರಸ್ ಇನ್ನಿತರರು ಹಾಜರಿದ್ದರು.

Leave a Reply

comments

Related Articles

error: