ಪ್ರಮುಖ ಸುದ್ದಿ

ಧರ್ಮಸ್ಥಳದ  ಧರ್ಮಾಧಿಕಾರಿ  ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ

ರಾಜ್ಯ(ಮಂಗಳೂರು)ಆ.13:-   ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ  ಮುಖ್ಯಮಂತ್ರಿಗಳು ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ   ಬಿ.ಎಸ್.ಯಡಿಯೂರಪ್ಪ ಅವರು ತೆರಳಿ, ಧರ್ಮಸ್ಥಳದ  ಧರ್ಮಾಧಿಕಾರಿ  ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು.

ಬೆಳ್ತಂಗಡಿ ಶಾಸಕ   ಹರೀಶ್ ಪೂಂಜಾ ಅವರು ಜೊತೆಗಿದ್ದರು. ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೆ ಉಂಟಾಗಿರುವ ಪ್ರದೇಶಗಳು ಹಾಗೂ ಪರಿಹಾರ ಕೇಂದ್ರದಲ್ಲಿ ಆಗುವ ಕಾರ್ಯಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಸಂಸದರಾದ   ನಳೀನ ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ   ಎನ್.ರವಿಕುಮಾರ್, ಮುಖ್ಯಮಂತ್ರಿಗಳ ಸಲಹೆಗಾರ   ಎಂ.ಲಕ್ಷ್ಮೀನಾರಾಯಣ ಹಾಗೂ ಜಿಲ್ಲೆಯ ಶಾಸಕರು ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: