ದೇಶ

ಜಮ್ಮು-ಕಾಶ್ಮೀರದಲ್ಲಿನ ನಿರ್ಬಂಧ ಹಿಂಪಡೆಯಲು ಸಾಧ್ಯವಿಲ್ಲ: ಸುಪ್ರೀಂ

ನವದೆಹಲಿ,ಆ.13- ಜಮ್ಮು-ಕಾಶ್ಮೀರದಲ್ಲಿ ಹೇರಲಾಗಿರುವ ನಿರ್ಬಂಧಗಳನ್ನು ಹಿಂಪಡೆಯುವಂತೆ ಆದೇಶ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಜಮ್ಮು-ಕಾಶ್ಮೀರದಲ್ಲಿ ಜನಜೀವನ ಸಾಮಾನ್ಯ ಸ್ಥಿತಿಗೆ ತರಲು ಸರ್ಕಾರಕ್ಕೆ ಸಮಯಾವಕಾಶ ನೀಡಬೇಕಾಗಿದೆ. ರಾತ್ರೋರಾತ್ರಿ ಏನೂ ಮಾಡಲು ಸಾಧ್ಯವಿಲ್ಲ. ಎರಡು ವಾರಗಳ ಬಳಿಕ ಈ ವಿಚಾರವನ್ನು ಮತ್ತೊಮ್ಮೆ ಕೈಗೆತ್ತಿಕೊಳ್ಳುತ್ತೇವೆ ಎಂದು ಸಾಮಾಜಿಕ ಕಾರ್ಯಕರ್ತ ತೆಹ್ಸೀನ್ ಪೂನಾವಾಲಾ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಜಸ್ಟಿಸ್ ಅರುಣ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಹೇಳಿದೆ.

2016ರ ಜುಲೈನಲ್ಲಿ ಬುರ್ಹಾನ್ ವಾನಿ ಮೃತಪಟ್ಟ ಸಂದರ್ಭದಲ್ಲಿ ರಾಜ್ಯದಲ್ಲಿ ಉಂಟಾದ ಪ್ರತಿಭಟನೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಶ್ಮೀರದಲ್ಲಿ ನಿರ್ಬಂಧ ಹೇರಲಾಗಿದೆ. ಅಲ್ಲಿನ ಪರಿಸ್ಥಿತಿಯನ್ನು ಆಧರಿಸಿ ಕೆಲವೇ ದಿನಗಳಲ್ಲಿ ನಿರ್ಬಂಧವನ್ನು ಸಡಿಲಿಸಲಾಗುವುದು. ಪ್ರತಿದಿನ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲಾಗುವುದು ಎಂದು ಕೇಂದ್ರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಸುಪ್ರೀಂಕೋರ್ಟ್‌ಗೆ ತಿಳಿಸಿದರು. (ಎಂ.ಎನ್)

 

Leave a Reply

comments

Related Articles

error: