ಸುದ್ದಿ ಸಂಕ್ಷಿಪ್ತ

ಮಹಾರಾಣಿ : ಕ್ರೀಡಾ ಚಟುವಟಿಕೆ ಹಾಗೂ ಪ್ರತಿಭಾ ಪುರಸ್ಕಾರ ನಾಳೆ

ಮೈಸೂರು,ಆ.13 : ಮಹಾರಾಣಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರವನ್ನು ಅ.14ರ ಬೆಳಗ್ಗೆ 10.30ಕ್ಕೆ ಕೆಂಪನಂಜಮ್ಮಣ್ಣಿ ಸಭಾ ಮಂಟಪದಲ್ಲಿ ಏರ್ಪಡಿಸಲಾಗಿದೆ.

ಶಾಸಕ ಎಲ್.ನಾಗೇಂದ್ರ ಉದ್ಘಾಟಿಸುವರು, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಪ್ರಾಧ್ಯಾಪಕರಾದ ಡಾ.ಎನ್.ಕೆ.ಲೋಲಾಕ್ಷಿಯವರಿಂದ ಮುಖ್ಯ ಭಾಷಣ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ರತ್ನ, ಪಾಲಿಕೆ ಸದಸ್ಯೆ ಪ್ರಮೀಳಾ ಭರತ್ ಹಾಜರಿರಲಿದ್ದು, ಕಾಲೇಜಿನ ಪ್ರಾಚಾರ್ಯರಾದ ಪಿ.ಸೋಮಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: