ಮೈಸೂರು

ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ  ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ

ಮೈಸೂರು,ಆ.14:- ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ  ಒಕ್ಕೂಟದ(ಮೈಮುಲ್) ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ.

ಇಂದು ಡೈರಿ ಆವರಣದಲ್ಲಿ 1 ಗಂಟೆಗೆ ಚುನಾವಣೆ ನಡೆಯಲಿದ್ದು  ಅಧ್ಯಕ್ಷರ ಚುನಾವಣೆಗೆ ಮಾವನಹಳ್ಳಿ ಸಿದ್ದೇಗೌಡ ಹಾಗೂ ಅಶೋಕ್  ನಾಮಪತ್ರ ಸಲ್ಲಿಸಿದ್ದಾರೆ. ಅಶೋಕ್ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಹೋದರಿ ಪುತ್ರರಾಗಿದ್ದು  ಮಾವನಹಳ್ಳಿ ಸಿದ್ದೇಗೌಡ  ಅವರು ಮಾಜಿ ಸಚಿವ ಜಿ.ಟಿ ದೇವೇಗೌಡರ ಆಪ್ತರಾಗಿದ್ದಾರೆ. ಹೀಗಾಗಿ ಇಬ್ಬರ ನಡುವೆ ತೀವ್ರ ಪೈಪೋಟಿ ಎದುರಾಗಲಿದೆ.

ಮೈಮುಲ್ ಅಧ್ಯಕ್ಷರ ಚುನಾವಣೆಯನ್ನು ಮಾಜಿ ಸಚಿವ ಜಿ ಟಿ ದೇವೇಗೌಡ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.  ಕಳೆದ ಬಾರಿ ಕೋರಂ ಕಾರಣದಿಂದ ಚುನಾವಣೆ ಮುಂದೂಡಲಾಗಿತ್ತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: