ಮೈಸೂರು

ಬ್ಯಾಂಕ್ ಸಭೆಯಲ್ಲಿ ಹೃದಯಾಘಾತದಿಂದ ಸಾವು

ಪ್ರಾಥಮಿಕ ಕೃಷಿ ಮತ್ತು ಭೂ ಅಭಿವೃದ್ದಿ ಬ್ಯಾಂಕಿನಲ್ಲಿ ಸಭೆ ನಡೆಯುತ್ತಿರುವಾಗಲೇ ನಿರ್ದೇಶಕರೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ  ಕೆ.ಆರ್.ನಗರದಲ್ಲಿ ನಡೆದಿದೆ.

ಮೃತರನ್ನು ಬ್ಯಾಂಕಿನ ನಿರ್ದೇಶಕ ಮಾಜಿ ಅಧ್ಯಕ್ಷ ಹೊಸಳ್ಳಿ ಕೃಷ್ಣೇಗೌಡ (64) ಎಂದು ಗುರುತಿಸಲಾಗಿದೆ.  ಕೆ.ಆರ್.ನಗರ ಪಟ್ಟಣದ ಬ್ಯಾಂಕಿನಲ್ಲಿ ಆಡಳಿತ ಮಂಡಳಿಯ ಮಾಸಿಕ ಸಭೆ ನಡೆಯುತ್ತಿತ್ತು. ಈ ಸಂದರ್ಭ ಅವರು ಅಲ್ಲಿಯೇ ಕುಸಿದಿದ್ದಾರೆ. ತಕ್ಷಣ ಚಿಕಿತ್ಸೆಗಾಗಿ ಸಾರ್ವಜನಿಕರು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Leave a Reply

comments

Related Articles

error: