
ಮೈಸೂರು
ಮೈಸೂರು-ಚಾಮರಾಜನಗರ ಹಾಲು ಒಕ್ಕೂಟ ಸಂಘದ ನೂತನ ಅಧ್ಯಕ್ಷರಾಗಿ ಮಾವಿನಹಳ್ಳಿ ಸಿದ್ದೇಗೌಡ ಅವಿರೋಧ ಆಯ್ಕೆ
ಮೈಸೂರು,ಆ.14:- ಮೈಸೂರು-ಚಾಮರಾಜನಗರ ಹಾಲು ಒಕ್ಕೂಟದ ಸಂಘದ ನೂತನ ಅಧ್ಯಕ್ಷರಾಗಿ ಮಾವಿನಹಳ್ಳಿ ಸಿದ್ದೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯೇ ನಡೆಯದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಿಎಂ ಬಿ.ಎಸ್.ಯಡಿಯೂರಪ್ಪನವರ ತಂಗಿ ಮಗ ಎಸ್.ಸಿ.ಅಶೋಕ್ ನಾಮಪತ್ರ ವಾಪಸ್ ಪಡೆದ ಹಿನ್ನಲೆಯಲ್ಲಿ ಅವಿರೋಧ ಆಯ್ಕೆ ನಡೆದಿದೆ. ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಸಿಎಂ ಬಿ.ಎಸ್.ಯಡಿಯೂರಪ್ಪನವರ ಜೊತೆ ಮಾತುಕತೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ತಂಗಿ ಮಗ ಎಸ್.ಸಿ.ಅಶೋಕ್ ನಾಮಪತ್ರ ವಾಪಸ್ ತೆಗೆದುಕೊಂಡಿದ್ದಾರೆ.
ಹಾಲು ಒಕ್ಕೂಟದಲ್ಲಿ 14 ಮಂದಿ ಸದಸ್ಯರಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಜಿ.ಟಿ ದೇವೇಗೌಡ ಅವರ ಮಾತುಕತೆ ಯಶಸ್ವಿಯಾಗಿದೆ. (ಕೆ.ಎಸ್,ಎಸ್.ಎಚ್)