ಮೈಸೂರು

ಅಣುಕು ನ್ಯಾಯಾಲಯ ಸ್ಪರ್ಧೆಗೆ ಚಾಲನೆ

ಮೈಸೂರು ಕುವೆಂಪುನಗರದಲ್ಲಿರುವ ಜೆ.ಎಸ್.ಎಸ್ ಕಾನೂನು ಕಾಲೇಜಿನಲ್ಲಿ ಶುಕ್ರವಾರ ಅಣುಕು ನ್ಯಾಯಾಲಯ ಸ್ಪರ್ಧೆಗೆ ಚಾಲನೆ ನೀಡಲಾಯಿತು.

ಬೆಂಗಳೂರು ಹೈಕೋರ್ಟ್ ನ ಮಾಜಿ ನ್ಯಾಯಾಧೀಶ ನ್ಯಾಯವಾದಿ ಅಜಿತ್ ಜೆ.ಗುಂಜಾಲ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ನ್ಯಾಯಾಲಯಕ್ಕೆ ಹೋದಾಗ ಯಾವ ರೀತಿ ನಿಯಮಗಳಿರುತ್ತವೆ ಎನ್ನವುದನ್ನು ತಿಳಿದುಕೊಳ್ಳಬೇಕು. ನ್ಯಾಯಾಲಯಕ್ಕೆ ಹೋಗಿ ಪ್ರಕರಣಗಳ ಕುರಿತು ಕೂಲಂಕುಷವಾಗಿ ತಿಳಿದುಕೊಳ್ಳಬೇಕು. ದಿನಕ್ಕೊಂದು ನಿಯಮಗಳು ಬರುತ್ತವೆ. ಅವುಗಳನ್ನು ತಿಳಿದುಕೊಳ್ಳಬೇಕು.  ತೆರಿಗೆ ಸೇರಿದಂತೆ ಹಲವು ವಿಷಯಗಳ ಕುರಿತಾದ ಕಾನೂನನ್ನು ಅರಿತುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ವಕೀಲರಾದ ಡಾ.ಎಸ್.ರವಿಚಂದ್ರನ್, ಬಾರ್ ಅಸೋಸಿಯೇಶನ್ ಅಧ್ಯಕ್ಷ ಜಿ.ವಿ.ರಾಮಮೂರ್ತಿ, ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಪಿ.ಜಿ.ಎಂ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: