ಪ್ರಮುಖ ಸುದ್ದಿ

ನೆರೆ ಪರಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಮನವಿ ಮಾಡುತ್ತೇನೆ : ಸಿಎಂ ಬಿಎಸ್ ಯಡಿಯೂರಪ್ಪ

ರಾಜ್ಯ(ಬೆಂಗಳೂರು)ಆ.16:- ನೆರೆ ಪರಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಮನವಿ ಮಾಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ನೆರೆ ಪರಿಹಾರ ಮತ್ತು ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಲು ನವದೆಹಲಿಗೆ ದೌಡಾಯಿಸಿರುವ ಸಿಎಂ ಬಿ.ಎಸ್ ಯಡಿಯೂರಪ್ಪ  ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ.  ಸಿಎಂಗೆ ಶಾಸಕರಾದ ಜಗದೀಶ್ ಶೆಟ್ಟರ್, ಆರ್.ಅಶೋಕ್, ಗೋವಿಂದ ಕಾರಜೋಳ ಸಾಥ್ ನೀಡಿದ್ದಾರೆ.

ಪ್ರಧಾನಿ ಮೋದಿ ಭೇಟಿಗೆ ತೆರಳುವ ಮುನ್ನ ಮಾಧ್ಯಮದ ಜತೆ ಮಾತನಾಡಿದ ಸಿಎಂ ಬಿಎಸ್ ವೈ, ಇಂದು ಪ್ರಧಾನಿ ಬಳಿಕ ನೆರೆ ಪರಿಹಾರಕ್ಕೆ ಮನವಿ ಮಾಡ್ತೇನೆ. ಎಷ್ಟು ಪರಿಹಾರ ಕೇಳುತ್ತೇನೆ ಎಂದು ಹೇಳಲು ಆಗಲ್ಲ. ಮೋದಿ  ಭೇಟಿ ವೇಳೆ ಏನು ಚರ್ಚೆ ಮಾಡುತ್ತೇನೆ ಎಂಬ ಬಗ್ಗೆ ಮಾಧ್ಯಮದ ಮುಂದೆ ಹೇಳಲು ಆಗಲ್ಲ ಎಂದರು.

ಹಾಗೆಯೇ ನಾಳೆ ಅಮಿತ್ ಶಾ ಅವರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ಮಾಡುತ್ತೇನೆ ಎಂದು ಬಿಎಸ್ ವೈ ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: