ಪ್ರಮುಖ ಸುದ್ದಿ

50 ಲಕ್ಷ ಸಿಎಂ ಪರಿಹಾರ ನಿಧಿಗೆ ಕೊಡ್ತೇನೆ ಅಂದ್ರು ಮಾಜಿ ಸಚಿವ ಡಿ.ಕೆ.ಶಿವಕುಮಾರ್

ರಾಜ್ಯ(ಬೆಂಗಳೂರು)ಆ.16:- ಕಿಸಾನ್ ಸಮ್ಮಾನ್ ಯೋಜನೆಗೆ ಅನ್ನಭಾಗ್ಯಕ್ಕೆ ಕತ್ತರಿ ಹಾಕಲು ರಾಜ್ಯ ಬಿಜೆಪಿ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಬದ್ಧತೆಯಿಂದ ಯೋಜನೆ ತಂದಿದ್ದಾರೆ. ನಮ್ಮ ಹಳೆಯ ಯೋಜನೆ ಕೈ ಬಿಟ್ಟರೆ ಸರಿಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸ ಬಳಿ ಮಾತನಾಡಿದ  ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್, ನಾವು ಜಾರಿಗೆ ತಂದಿರುವ ಯೋಜನೆಗಳನ್ನ ರದ್ದು ಪಡಿಸಬಾರದು. ನಮ್ಮ ಯೋಜನೆ ಬಗ್ಗೆ ನಮಗೆ ಬದ್ಧತೆಯಿದೆ. ದ್ವೇಷದ ರಾಜಕಾರಣ ಮಾಡಲ್ಲ ಅಂತ ಸಿಎಂ ಹೇಳಿದ್ದಾರೆ. ಅದರಂತೆ ಅವರು ನಡೆದುಕೊಳ್ಳಬೇಕು. ನಮ್ಮ ಕಾರ್ಯಕ್ರಮ ತೆಗೆದರೆ ನಾವು ಸುಮ್ಮನಿರಲ್ಲ. ಅದರ ಬಗ್ಗೆ ವಿಸ್ತೃತ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಹಲವೆಡೆ ಪ್ರವಾಹ ಪರಿಸ್ಥಿತಿ ವಿಚಾರ ಮತ್ತು ಕೇಂದ್ರದಿಂದ ನೆರೆ ಪರಿಹಾರ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಚಿವ ಡಿಕೆ ಶಿವಕುಮಾರ್, ಕೊಡಗು, ಮಲೆನಾಡು, ಉತ್ತರ ಕರ್ನಾಟಕದಲ್ಲಿ ಪ್ರವಾಹ ಆಗಿದೆ. ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಿಎಂ ಪ್ರತಿಮನೆಗೆ  5 ಲಕ್ಷ ಕೊಡ್ತೇನೆ ಅಂತ ಘೋಷಿಸಿದ್ದಾರೆ. ಅವರು ಹೇಳಿದಂತೆ ಸಿಎಂ ನಡೆದುಕೊಳ್ಳಲಿ ಎಂದು ಹೇಳಿದರು.

ನಾನು 50 ಲಕ್ಷ ಸಿಎಂ ಪರಿಹಾರ ನಿಧಿಗೆ ಕೊಡ್ತೇನೆ

ನೆರೆ ಸಂತ್ರಸ್ತರ ನೆರವಿಗೆ ಧಾವಿಸಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್, ಸಿಎಂ ಬಿಎಸ್ ವೈ ಇದೀಗ ದೆಹಲಿಗೆ ಹೋಗಿದ್ದಾರೆ. ಅಲ್ಲಿಂದ ಎಷ್ಟು ಗಿಫ್ಟ್ ತರ್ತಾರೆ ನೊಡೋಣ. ನಾನು 50 ಲಕ್ಷ ಸಿಎಂ ಪರಿಹಾರ ನಿಧಿಗೆ ಕೊಡ್ತೇನೆ ಎಂದು ಹೇಳಿದರು.

ಫೋನ್ ಟ್ಯಾಪಿಂಗ್ ಆರೋಪ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ಯಾವುದೇ ಫೋನ್ ಟ್ಯಾಪಿಂಗ್  ಆಗಿಲ್ಲ. ಮಾಧ್ಯಮಗಳಿಗೆ ಅದು ಹೇಗೆ ಸಿಗ್ತೋ ಗೊತ್ತಿಲ್ಲ. ನಾನು ಇದರ ಬಗ್ಗೆ ವಿಚಾರಿಸಿದ್ದೇನೆ. ಸಿಎಂ ಇದರ ಬಗ್ಗೆ ಯಾವ ತನಿಖೆ ಬೇಕಾದರೂ ಮಾಡಲಿ ಎಂದು ಸ್ಪಷ್ಟನೆ ನೀಡಿದರು.

ಇದರ ಬಗ್ಗೆ ಆರ್.ಅಶೋಕ್ ಆರೋಪ ವಿಚಾರ ಕುರಿತು ಮಾತನಾಡಿದ ಡಿಕೆಶಿ, ಹಿಂದಿನ ಗೃಹ ಸಚಿವರಿಗೆ ರಾಜಕಾರಣ ಬೇಕಾಗಿದೆ. ಹಾಗಾಗಿ ಇದರಲ್ಲಿ ರಾಜಕೀಯ ಮಾಡ್ತಿದ್ದಾರೆ. ನಮ್ಮ ಮೇಲೆಲ್ಲ ರೇಡ್ ಗಳು ನಡೆದಿದೆ. ಆಗ ನಮ್ಮ ಮೇಲೆ ಸುಮ್ಮ ಸುಮ್ಮನೆ ಟ್ಯಾಪಿಂಗ್ ಮಾಡಿದ್ರಾ. ಅವರು ಏನೇನು ಮಾಡಿದ್ದಾರೆ ಅನ್ನೋದು ಗೊತ್ತಿದೆ. ಏನ್ ಬೇಕೋ ಮಾಡಲಿ,ಹೇಳಲಿ. ಬಿಜೆಪಿಯವರು ನಮ್ಮ ಫೋನ್ ಕದ್ದಾಲಿಸಿದ್ದಾರೆ ಎಂದು ಬಿಜೆಪಿ ನಾಯಕರಿಗೆ ಪರೋಕ್ಷ ಟಾಂಗ್ ನೀಡಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: