ಮೈಸೂರು

ಮಗಳ ಸಾವಿನಿಂದ ಮನನೊಂದ ಗೃಹಿಣಿ ನೇಣು ಬಿಗಿದು  ಆತ್ಮಹತ್ಯೆ

ಮೈಸೂರು,ಆ.19:-  ಮಗಳ ಸಾವಿನಿಂದ ಮನನೊಂದ ಗೃಹಿಣಿಯೋರ್ವರು ನೇಣು ಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಮುಡುಕುತೊರೆ ಗ್ರಾಮದ ಬಳಿ ನಡೆದಿದೆ.

ಮೃತರನ್ನು ರಾಮನಗರ ಪಟ್ಟಣದ  ವಿದ್ಯಾನಗರ ಬಡಾವಣೆಯ ನಿವಾಸಿ ಗೌರಮ್ಮ (40) ಎಂದು ಗುರುತಿಸಲಾಗಿದೆ. ಇವರು ತಮ್ಮ ಮಗಳ ಸಾವಿಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹಿಂದೆಯೂ ಕೂಡ ಎರಡು ಬಾರಿ ಆತ್ಮಹತ್ಯೆಗೆ ಮುಂದಾಗಿದ್ದರು. ಘಟನಾ ಸ್ಥಳಕ್ಕೆ ಮೃತ ದುರ್ದೈವಿ ಗೌರಮ್ಮನ ಸಂಬಂಧಿಕರ ಆಗಮಿಸಿದ್ದಾರೆ.

ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್).

Leave a Reply

comments

Related Articles

error: