ಪ್ರಮುಖ ಸುದ್ದಿ

ಪ್ರವಾಹ ಸಂತ್ರಸ್ತರ ನೆರವಿಗೆ 195 ಕೋಟಿ ರೂ. ಬಿಡುಗಡೆ

ರಾಜ್ಯ(ಬೆಂಗಳೂರು)ಆ.20:- ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು, ಪರಿಹಾರ ಕಾರ್ಯಗಳಿಗೆ ಹಾಗೂ ನೆರೆ ಸಂತ್ರಸ್ತರಿಗೆ ಬಟ್ಟೆ ಬರೆ ಮತ್ತಿತರ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಒಟ್ಟು 195 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಪ್ರವಾಹ ಪೀಡಿತ ತಾಲೂಕುಗಳಲ್ಲಿ ಬಾಧಿತ ಸಂತ್ರಸ್ತರಿಗೆ ಬಟ್ಟೆ ಬರೆ ಹಾಗೂ ದಿನ ಬಳಕೆಯ ವಸ್ತುಗಳಿಗಾಗಿ ಪ್ರತಿ ಕುಟುಂಬಕ್ಕೆ 10 ಸಾವಿರ ರೂ. ಗಳಂತೆ ವಿತರಿಸಲು, ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ ರಾಜ್ಯ ಸರ್ಕಾರದ ಹೆಚ್ಚುವರಿ ಪಾಲಿನ ಅನುದಾನದಿಂದ 80 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ.

ಅಲ್ಲದೆ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಯನ್ನು ನಿರ್ವಹಿಸಲು ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು 115 ಕೋಟಿ ರೂ. ಅನುದಾನವನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು  ತಿಳಿದು ಬಂದಿದೆ.  (ಎಸ್.ಎಚ್)

Leave a Reply

comments

Related Articles

error: