ಪ್ರಮುಖ ಸುದ್ದಿ

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅಸಮಾಧಾನ ಸ್ಪೋಟ : ಶಾಸಕ ಜಿ.ಎಚ್ ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೆಂಗಲಿಗರ ಪ್ರತಿಭಟನೆ

ರಾಜ್ಯ(ಚಿತ್ರದುರ್ಗ)ಆ.20:- ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅಸಮಾಧಾನ ಸ್ಪೋಟಗೊಂಡಿದ್ದು ಚಿತ್ರದುರ್ಗ ಕ್ಷೇತ್ರದ ಶಾಸಕ ಜಿ.ಎಚ್ ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬಿಜೆಪಿ ಹೈಕಮಾಂಡ್  ವಿರುದ್ಧ ಆಕ್ರೋಶಗೊಂಡ ಬೆಂಗಲಿಗರು  ಪ್ರತಿಭಟನೆ ಮಾಡಿದ್ದಾರೆ.

ನಗರದ ಗಾಂಧಿ ವೃತ್ತಕ್ಕೆ ಜಮಾಯಿಸಿದ ಶಾಸಕ ಜಿ.ಎಚ್ ತಿಪ್ಪಾರೆಡ್ಡಿ ಅವರ ಬೆಂಬಲಿಗರು ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಪಕ್ಷಕ್ಕೆ ನಿಷ್ಠೆಯಿಂದ ಇದ್ದವರು ತಮಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ಭರವಸೆಯಲ್ಲಿದ್ದ ಶಾಸಕರಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದ್ದು, ಯಾವುದೇ ಸಚಿವ ಸ್ಥಾನ ನೀಡಿಲ್ಲ. ಹೀಗಾಗಿ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಶಾಸಕ ತಿಪ್ಪಾರೆಡ್ಡಿ ಬೆಂಬಲಿಗರು ಧರಣಿ ನಡೆಸುತ್ತಿದ್ದು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸ್ಥಳಕ್ಕೆ ಎಸ್ ಪಿ ಕೆ.ಅರುಣ ಅವರು ಭೇಟಿ ನೀಡಿದ್ದಾರೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: