ಮೈಸೂರು

ಚುಂಚಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ: ಅಂಬರೀಷ್ ಗೈರು

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಆದಿಚುಂಚನಗಿರಿ ಮಠ ನೀಡುವ ಚುಂಚಶ್ರೀ ಪ್ರಶಸ್ತಿಗೆ ಈ ಬಾರಿ ಐದು ಮಂದಿ ಸಾಧಕರು ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಂದು ಆದಿಚುಂಚನಗಿರಿ ಮಠದಲ್ಲಿ ನಡೆಯುತ್ತಿದೆ. ಆದರೆ, ಅಂಬರೀಷ್ ಈ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.

ಪರಿಸರ ಸೇವೆಯನ್ನು ಗಮನಿಸಿ ಸಾಲುಮರದ ತಿಮ್ಮಕ್ಕ, ಸಾಹಿತ್ಯ ಕ್ಷೇತ್ರದಲ್ಲಿ ಸಿದ್ಧಲಿಂಗಯ್ಯ ಮತ್ತು ಕಲಾಕ್ಷೇತ್ರದಲ್ಲಿ ಅಂಬರೀಷ್ ಅವರಿಗೆ ಚುಂಚಶ್ರೀ ಪ್ರಶಸ್ತಿ ಲಭಿಸಿದೆ. ಕಾವೇರಿ ವಿಚಾರದಲ್ಲಿ ಮೌನವಹಿಸಿದ ಸಚಿವ ಅಂಬರೀಷ್ ಈ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಭಾಗವಹಿಸದಂತೆ ನಿನ್ನೆ ಮಂಡ್ಯದಲ್ಲಿ ಪ್ರತಿಭಟನೆ ನಡೆದಿತ್ತು.

Leave a Reply

comments

Tags

Related Articles

error: