ಮೈಸೂರು

ಶ್ರೀರಾಮುಲುಗೆ ಉಪಮುಖ್ಯಮಂತ್ರಿ : ನೀಡಿದ ಭರವಸೆ ಈಡೇರಿಸಲು ನಾಯಕ ಜನಾಂಗ ಆಗ್ರಹ

ಮೈಸೂರು,ಆ.21 : ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ನಾಯಕ ಜನಾಂಗಕ್ಕೆ ಕೇವಲ ಒಂದೇ ಒಂದು ಸ್ಥಾನ ನೀಡುವ ಮೂಲಕ ಜನಾಂಗವನ್ನು ನಿರ್ಲಕ್ಷ್ಯ ಮಾಡಲಾಗಿದ್ದು ನೀಡಿದ ಭರವಸೆಯಂತೆ ಶ‍್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಎಂದು ಮೈಸೂರು ನಾಯಕರ ಪಡೆ ಆಗ್ರಹಿಸಿದೆ.

ವಿಧಾನಸಭಾ ಹಾಗೂ ಲೋಕಸಭಾ ಕಳೆದ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಬಿಜೆಪಿ ನಾಯಕರು ತಾವು ಅಧಿಕಾರಕ್ಕೆ ಬಂದ್ರೆ ಶ್ರೀರಾಮುಲು ಅವರನ್ನು ಉಪಮುಖ್ಯಮಂತ್ರಿ ಸ್ಥಾನ ನೀಡುವುದರೊಂದಿಗೆ ಮೂರು ಸಚಿವ ಸ್ಥಾನ ನೀಡಿ ಶೇ.7.5ರಷ್ಟು ಮೀಸಲಾತಿ ಘೋಷಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಅವರ ಮಾತಿನಂತೆ ಬಿಜೆಪಿಯು ಅತಿ ದೊಡ್ಡ ಪಕ್ಷವಾಗಿ ಹೊರಬರಲು ತಮ್ಮ ಸಮಾಜದ ಕೊಡುಗೆ ಹೆಚ್ಚಿದ್ದು, ಆದ್ದರಿಂದ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯನ್ನು ಈಡೇರಿಸಬೇಕೆಂದು ಪಡೆಯ ಅಧ್ಯಕ್ಷ ಪಡುವಾರಹಳ್ಳಿ ಎಂ.ರಾಮಕೃಷ್ಣ ಆಗ್ರಹಿಸಿದ್ದಾರೆ.

ಅಲ್ಲದೇ ನೀಡಿದ ಭರವಸೆ ಈಡೇರಿಸಿ ಹಾಗೂ ಪ್ರತ್ಯೇಕ ಸಚಿವಾಲಯ ನೀಡುವ ಮೂಲಕ ಜನಾಂಗವನ್ನು ರಾಜಕೀಯ, ಸಾಮಾಜಿಕ ಮತ್ತು ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿರುವರು. (ಕೆ.ಎಂ.ಆರ್)

Leave a Reply

comments

Related Articles

error: