ದೇಶಪ್ರಮುಖ ಸುದ್ದಿ

ಇಸ್ರೋ ಅಧ್ಯಕ್ಷ ಕೆ.ಶಿವನ್ ಗೆ ಅಬ್ದುಲ್ ಕಲಾಂ ಪ್ರಶಸ್ತಿ

ಚೆನ್ನೈ,ಆ.22- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಅಧ್ಯಕ್ಷ, ಚಂದ್ರಯಾನ-2 ಯಶಸ್ಸಿನ ರೂವಾರಿ ಕೆ.ಶಿವನ್ ಅವರಿಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ, ಶಿವನ್ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಪ್ರಶಸ್ತಿ 8 ಗ್ರಾಂ ಚಿನ್ನದ ಪದಕ, ಐದು ಲಕ್ಷ ರೂ. ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.

ಇತ್ತೀಚೆಗೆ ಚಂದ್ರಯಾನ-2 ಮಿಷನ್ ಅನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದ್ದು ಇದರ ನೇತೃತ್ವ ವಹಿಸಿದ್ದ ಶಿವನ್ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಶಿವನ್ ಅವರ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಶಿವನ್ ಅವರು ಆ.15 ರಂದು ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಚೆನ್ನೈನಲ್ಲಿನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಬೇಕಾಗಿತ್ತು. ಆದರೆ ಕಾರಣಾಂತರದಿಂದ ಅದು ಸಾಧ್ಯವಾಗದ ಕಾರಣ ಇಂದು ಪ್ರಶಸ್ತಿ ಸ್ವೀಕಾರ ಕಾರ್ಯಕ್ರಮ ನೆರವೇರಿದೆ. (ಎಂ.ಎನ್)

Leave a Reply

comments

Related Articles

error: