
ಪ್ರಮುಖ ಸುದ್ದಿಮೈಸೂರು
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಚಿವ ವಿ. ಸೋಮಣ್ಣ ನೇಮಕ
ಮೈಸೂರು,ಆ.22:- ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಚಿವ ವಿ. ಸೋಮಣ್ಣ ಅವರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದಾರೆ.
ವಿ ಸೋಮಣ್ಣ ಸಚಿವರು, ಕರ್ನಾಟಕ ಸರ್ಕಾರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನಾಡ ಹಬ್ಬ ದಸರಾ ಸಮೀಪಿಸುತ್ತಿದ್ದು, ದಸರಾ ಸಿದ್ಧತೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ತುರ್ತು ಅಗತ್ಯ ಇರುವುದರಿಂದ ರಾಜ್ಯ ಸರ್ಕಾರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ಮಾತ್ರವೇ ನೇಮಕ ಮಾಡಿದೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)