Uncategorized

ಮೀ ಟೂ ಪ್ರಕರಣ: ನಟಿ ಶ್ರುತಿ ಹರಿಹರನ್ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು,ಆ.23-ಮೀ ಟೂ ಪ್ರಕರಣದಲ್ಲಿ ನಟಿ ಶ್ರುತಿ ಹರಿಹರನ್ ಗೆ ಹಿನ್ನಡೆಯಾಗಿದೆ. ನಟ ಅರ್ಜುನ್ ಸರ್ಜಾ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ವಜಾಗೊಳಿಸುವಂತೆ ಶ್ರುತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಶ್ರುತಿ ಹರಿಹರನ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ವಾದ-ಪ್ರತಿವಾದ ಆಲಿಸಿದ ಕೋರ್ಟ್ ನ್ಯಾಯಾಧೀಶೆ ಸುವರ್ಣ ಮಿರ್ಜಿ ಧ್ರುವ ಸರ್ಜಾ ಸಲ್ಲಿಸಿದ್ದ ಮಾನನಷ್ಟ ಅರ್ಜಿ ಊರ್ಜಿತವಾಗಿದೆ ಎಂದು ಶ್ರುತಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಅರ್ಜಿ ವಜಾಗೊಳಿಸಿರುವುದರಿಂದ ಮಾನನಷ್ಟ ಮೊಕದ್ದಮೆ ವಿಚಾರಣೆ ಮುಂದುವರೆಯಲಿದೆ.

ನಟ ಅರ್ಜುನ್ ಸರ್ಜಾ ಪರವಾಗಿ ಧ್ರುವ ಸರ್ಜಾ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಮೀ ಟೂ ಆರೋಪದ ಕುರಿತು ಸಾಮಾಜಿಕ ತಾಲತಾಣದಲ್ಲಿ ವಿವರ ಪ್ರಕಟಿಸದಂತೆ ತಡೆ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದ ಧ್ರುವ ಸರ್ಜಾ, ಶ್ರುತಿ ಹರಿಹರನ್ ವಿರುದ್ಧ ಮಾನನಷ್ಟ ಮೊಕದ್ದಮೆ ಸಹ ದಾಖಲಿಸಿದ್ದರು.

ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ವಿರುದ್ಧ ಮೀ ಟೂ ಆರೋಪ ಮಾಡಿದ್ದರು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸರ್ಜಾ ವಿರುದ್ಧ ದೂರು ನೀಡಿದ್ದರು. ದೂರಿನ ಬಗ್ಗೆ ಎಫ್ಐಆರ್ ದಾಖಲಿಸಲು ಹೈಕೋರ್ಟ್ ತಡೆಯಾಜ್ಞೆ ನೀಡಿದೆ. (ಎಂ.ಎನ್)

Leave a Reply

comments

Related Articles

error: