ದೇಶ

ಪಾಕ್ ನಿಂದ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ: ಯೋಧ ಹುತಾತ್ಮ

ಜಮ್ಮು,ಆ.23-ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ವಲಯದ ಕಾಲ್ಸಿಯಾ ಗ್ರಾಮದಲ್ಲಿ ಗಡಿ ನಿಯಂತ್ರಣ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಸೈನಿಕರು ಅಪ್ರಚೋದಿನ ಗುಂಡಿನ ದಾಳಿ ನಡೆಸಿದರು.

ತೀವ್ರವಾಗಿ ಗಾಯಗೊಂಡಿದ್ದ ಯೋಧನನ್ನು ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯೋಧ ಹುತಾತ್ಮರಾಗಿದ್ದಾರೆ.

ಪಾಕಿಸ್ತಾನ ಸೈನಿಕರ ಗುಂಡಿನ ದಾಳಿಗೆ ಭಾರತೀಯ ಸೇನೆ ಪರಿಣಾಮಕಾರಿಯಾಗಿ ಪ್ರತಿದಾಳಿ ನಡೆಸಿತು. ಆ.17ರ ನಂತರ ರಜೌರಿ ಮತ್ತು ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಯೋಧರು ನಡೆಸಿದ ಶಸ್ತ್ರಾಸ್ತ್ರ ಮತ್ತು ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ನಾಲ್ಕು ಯೋಧರು ಹುತಾತ್ಮರಾಗಿದ್ದರು. (ಎಂ.ಎನ್)

Leave a Reply

comments

Related Articles

error: