ಮೈಸೂರು

ನೆರೆ ಸಂತ್ರಸ್ಥ ಮಕ್ಕಳಿಗೆ ಶ್ರೀಸುತ್ತೂರು ಮಠದಿಂದ ಉಚಿತ ಶಿಕ್ಷಣ

ಮೈಸೂರು,ಆ.23:-ಕರ್ನಾಟಕದ ಅನೇಕ ಭಾಗಗಳಲ್ಲಿ ವಿಶೇಷವಾಗಿ ಉತ್ತರಕರ್ನಾಟಕದ ನೆರೆ ಹಾವಳಿಯಿಂದ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸಂತ್ರಸ್ಥರ ಕುಟುಂಬದವರು ಅವರ ಮಕ್ಕಳನ್ನು ಕಳುಹಿಸಿಕೊಟ್ಟರೆ ಜೆಎಸ್ ಎಸ್ ಮಹಾವಿದ್ಯಾಪೀಠದ ಶಾಲಾ, ಕಾಲೇಜು, ತಾಂತ್ರಿಕ ಹಾಗೂ ವೃತ್ತಿಪರ ಕಾಲೇಜುಗಳಲ್ಲಿ ಉಚಿತ ಶಿಕ್ಷಣಕ್ಕೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಜೆಎಸ್ ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರಮಠ ತಿಳಿಸಿದ್ದಾರೆ.

ಆಸನ-ವಸತಿಗಳಿಗೂ ಅನುಕೂಲ ಮಾಡಿಕೊಡಲಾಗುವುದು. ಆಸಕ್ತ ಪೋಷಕರು ಆಯಾ ಜಿಲ್ಲೆಗಳ ಸರ್ಕಾರದ ಸಂಬಂಧಪಟ್ಟ ಅಧಿಕಾರಿಗಳಿಂದ ದೃಢೀಕರಣ ಪತ್ರ ಪಡೆದು ಹೆಚ್ಚಿನ ಮಾಹಿತಿಗಾಗಿ ಬಿ.ನಿರಂಜನಮೂರ್ತಿಯವರನ್ನು ಜೆಎಸ್ ಎಸ್ ಮಹಾವಿದ್ಯಾಪೀಠದಲ್ಲಿ ನೇರವಾಗಿ ಅಥವಾ 8884471974 ಈ ಮೊಬೈಲ್ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ. (ಎಸ್.ಎಚ್)

Leave a Reply

comments

Related Articles

error: