ಮೈಸೂರು

ಸಾಲ ಮರುಪಾವತಿಸಲಾಗದೇ ರೈತ ಆತ್ಮಹತ್ಯೆ

ಸಿ ಎಂ ತವರು ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದೆ.  ರೈತನೋರ್ವ ಸಾಲ ಮರುಪಾವತಿಸಲಾಗದೇ ವಿಷಸೇವಿಸಿ  ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಚ್ ಡಿ ಕೋಟೆ ತಾಲೂಕಿನ ಬೀರಂಬಳ್ಳಿಯಲ್ಲಿ ನಡೆದಿದೆ.

ಮೃತನನ್ನು ಬೀರಂಬಳ್ಳಿ ಗ್ರಾಮದ ಮಹದೇವ (45) ಎಂದು ಗುರುತಿಸಲಾಗಿದೆ. ಈತ ಮೂರು ಲಕ್ಷ ಕೈಸಾಲ ಮಾಡಿಕೊಂಡಿದ್ದು, ಸಾಲ ಮರುಪಾವತಿಸಲಾಗದೇ ಮನನೊಂದು  ತನ್ನ ಜಮೀನಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮೃತ ಮಹದೇವ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್ ಹಾಗೂ ಸ್ಥಳಿಯ ಜನಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: