ಕರ್ನಾಟಕಪ್ರಮುಖ ಸುದ್ದಿ

ಮೇಕೆದಾಟು ಯೋಜನೆ ಜಾರಿಗೆ ಸರ್ಕಾರ ಬದ್ಧ : ಸಿದ್ದರಾಮಯ್ಯ

ಹಾಸನ: ಕುಡಿಯುವ ನೀರಿಗಾಗಿ ಮೇಕೆದಾಟು ಬಳಿ ಜಲಾಶಯ ನಿರ್ಮಿಸುವ ಯೋಜನೆಯನ್ನು ಕಾರ್ಯರೂಪಕ್ಕಿಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ಈ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅರಸೀಕೆರೆಯಲ್ಲಿ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿ ಮಾತನಾಡಿದ ಅವರು, ರಾಜಕೀಯ ಕಾರಣಗಳಿಗಾಗಿ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿದೆ. ಆದರೆ ಈ ಯೋಜನೆಯಿಂದ ತಮಿಳುನಾಡಿಗೂ ಉಪಯೋಗವಾಗಲಿದೆ ಎಂದು ಅವರು ಹೇಳಿದ್ದಾರೆ.

ಯೋಜನೆಗಾಗಿ ಸರ್ಕಾರ 5,900 ಕೋಟಿ ರೂ. ವೆಚ್ಚ ಮಾಡಲು ನಿರ್ಧರಿಸಿದೆ, ಯೋಜನೆ ರೂಪರೇಷೆಯನ್ನು ಕೇಂದ್ರಕ್ಕೆ ಕಳುಹಿಸಿದ್ದು, ಕೇಂದ್ರ ಜಲಸಂಪನ್ಮೂಲ ಇಲಾಖೆಯ ಅನುಮೋದನೆಗಾಗಿ ಕಾಯಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Leave a Reply

comments

Related Articles

error: