ಮೈಸೂರು

ದಿ.26ರಂದು ‘ಗಳಗನಾಥ -ರಾಜಪುರೋಹಿತ’ ಪ್ರಶಸ್ತಿ ಪ್ರದಾನ

ಮೈಸೂರು,ಆ.24 : ಗಳಗನಾಥ ಮತ್ತು ನಾ.ಶ್ರೀ ರಾಜಪುರೋಹಿತ ಪ್ರತಿಷ್ಠಾನ ಹಾವೇರಿ, ಹಾಗೂ ಮೈವಿವಿಯ ಕುವೆಂಪು ಕ್ನನಡ ಅಧ್ಯಯನ ಸಂಸ್ಥೆ ಸಹಯೋಗದ್ಲಲಿ 2018ರ ಗಳಗನಾಥ ಮತ್ತು ನಾ.ಶ್ರೀ ರಾಜಪುರೋಹಿತ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆ.26ರ ಬೆಳಗ್ಗೆ 10.30ಕ್ಕೆ ವಿವಿಯ ಬಿ.ಎಂ.ಶ್ರೀ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಮೈವಿವಿ ಕುಲಪತಿಗಳಾದ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟಿಸುವರು, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಮನು ಬಳಿಗಾರ್ ಪ್ರಶಸ್ತಿ ಪ್ರದಾನ ಮಾಡುವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಜಾನಕಿ, ಕುಕಅಸಂ ನಿರ್ದೇಶಕ ಡಾ.ಎನ.ಎಂ.ತಳವಾರ್ ಹಾಜರಿರಲಿದ್ದಾರೆ.

ಸಂಸ್ಕೃತ ವಿವಿಯ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್ ಗಳಗನಾಥರ ಕುರಿತು, ಸಾಹಿತಿ ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿಯವರು ನಾ.ಶ್ರೀರಾಜಪುರೋಹಿತರ ಕುರಿತು ಮಾತನಾಡುವರು. (ಕೆ.ಎಂ.ಆರ್)

Leave a Reply

comments

Related Articles

error: