ಮೈಸೂರು

ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ಕರ್ನಾಟಕ ರಾಜ್ಯ ಅರಸು ಮಹಾಸಭಾ ವತಿಯಿಂದ  ಮೈಸೂರಿನಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಜನ್ಮದಿನದ ಅಂಗವಾಗಿ ಎರಡು ದಿನಗಳ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.

ಮೈಸೂರಿನ ಮಹಾರಾಜ ಕಾಲೇಜು ಫುಟ್ಬಾಲ್ ಮೈದಾನದಲ್ಲಿ ಭಾನುವಾರ ಪಂದ್ಯಾವಳಿಗೆ  ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯ್ಯುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭ ಉಪಸ್ಥಿತರಿದ್ದ ಮೈಸೂರು ಮಹಾನಗರಪಾಲಿಕೆಯ ಮಹಾಪೌರ ಎಂ.ಜೆ.ರವಿಕುಮಾರ್ ಮಾತನಾಡಿ  ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಹೆಸರಿನಲ್ಲಿ ನಡೆಸುತ್ತಿರುವುದು ಸಂತಸ ನೀಡಿದೆ. ಪಂದ್ಯಾವಳಿಯಲ್ಲಿ ಕಪ್ ನ್ನು ಯಾರು ಪಡೆಯುತ್ತಾರೆ ಎನ್ನುವುದು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ ಎಂದರು. ಸೋಲನ್ನು ಸಂತೋಷದಿಂದಲೇ ಸ್ವೀಕರಿಸಬೇಕು. ಸೋಲೇ ಯಶಸ್ಸಿನ ಮೆಟ್ಟಿಲು ಎಂಬುದನ್ನು ಅರಿತಾಗ ಮುಂದೆ ಗೆಲುವನ್ನು ಸಾಧಿಸಬಹುದು ಎಂದು ತಿಳಿಸಿದರು. ಇದು ಕೇವಲ ವಿವಿಧ ಸಂಘ ಸಂಸ್ಥೆಗಳಿಗೆ ಸೀಮಿತವಾಗದೇ ಮುಂದಿನ ದಿನಗಳಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳೂ ಇದರಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದರು.

ಈ ಸಂದರ್ಭ  ಅರಸು ಮಹಾಸಭಾದ ನಂದೀಶ್ ರಾಜೇ ಅರಸ್, ಪತ್ರಕರ್ತರ ಸಂಘದ ಅಧ್ಯಕ್ಷ ದೀಪಕ್ , ಹೋಟೆಲ್ ಅಸೋಸಿಯೇಶನ್ ನ ಅಧ್ಯಕ್ಷ ನಾರಾಯಣ ಗೌಡ, ನಗರಪಾಲಿಕೆ ಸದಸ್ಯ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಮಹಾನಗರಪಾಲಿಕೆ, ವಕೀಲರ ಸಂಘ, ಪತ್ರಕರ್ತರ ಸಂಘದ ಸದಸ್ಯರು ಪಾಲ್ಗೊಂಡಿದ್ದರು.

Leave a Reply

comments

Related Articles

error: