ದೇಶ

ಫಿರೋಜ್ ಶಾ ಕೋಟ್ಲಾ ಮೈದಾನಕ್ಕೆ ಅರುಣ್‌ ಜೇಟ್ಲಿ ಸ್ಟೇಡಿಯಂ ಎಂದು ಮರು ನಾಮಕರಣ

ನವದೆಹಲಿ,ಆ.27- ದಿಲ್ಲಿ ಕ್ರಿಕೆಟ್‌ ಸಂಸ್ಥೆಯನ್ನು ಕಟ್ಟಿ ಬೆಳೆಸುವಲ್ಲಿ ಯಶಸ್ವಿಯಾಗಿದ್ದ ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಅವರಿಗೆ ಗೌರವ ಸಲ್ಲಿಸಲು ಸರ್ಕಾರ ಮುಂದಾಗಿದೆ.

ಅರುಣ್ ಜೇಟ್ಲಿ ಸ್ಮರಣಾರ್ಥ ದಿಲ್ಲಿಯ ಜನಪ್ರಿಯ ಫಿರೋಜ್‌ ಶಾ ಮೈದಾನವನ್ನು ಅರುಣ್‌ ಜೇಟ್ಲಿ ಸ್ಟೇಡಿಯಂ ಎಂದು ಮರುನಾಮಕರಣ ಮಾಡಲಾಗುವುದು ಎಂದು ದಿಲ್ಲಿ ಕ್ರಿಕೆಟ್‌ ಅಸೋಸಿಯೇಷನ್‌ ತಿಳಿಸಿದೆ. ಸ್ಟೇಡಿಯಂ ಹೆಸರು ಬದಲಾವಣೆಯಾದರೂ ಮೈದಾನವನ್ನು ಫಿರೋಜ್‌ ಶಾ ಕೋಟ್ಲಾ ಎಂದೇ ಮುಂದುವರಿಸಲಾಗುವುದು ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ಇದೇ ಸಂದರ್ಭದಲ್ಲಿ ಕ್ರೀಡಾಂಗಣದಲ್ಲಿ ಸ್ಟಾಂಡ್‌ವೊಂದಕ್ಕೆ ವಿರಾಟ್ ಕೊಹ್ಲಿ ಹೆಸರು ಇಡಲಾಗುವುದು ಎಂದು ಕ್ರಿಕೆಟ್‌ ಅಸೋಸಿಯೇಷನ್‌ ತಿಳಿಸಿದೆ. ಸೆಪ್ಟೆಂಬರ್‌ 12ರಂದು ಮರು ನಾಮಕರಣ ಕಾರ್ಯಕ್ರಮ ಆಯೋಜಿಸಲಾಗಿದೆ.

ಅರುಣ್ ಜೇಟ್ಲಿ ಕ್ರಿಕೆಟ್ ಪ್ರೇಮಿಯಾಗಿದ್ದರು. ದಿಲ್ಲಿ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. (ಎಂ.ಎನ್)

Leave a Reply

comments

Related Articles

error: