ಸುದ್ದಿ ಸಂಕ್ಷಿಪ್ತ

ಎಸ್.ಡಿ.ಎಂ ನಲ್ಲಿ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ ನಾಳೆ

ಮೈಸೂರು,ಆ.28 : ಎಂ.ಎಂ.ಕೆ ಮತ್ತು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ವಿವಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದಲ್ಲಿ ರಾ.ಸೇ.ಯೋ.ಸ್ವಯಂ ಸೇವಕ, ಸೇವಕಿಯರ ಜಿಲ್ಲಾ ಮಟ್ಟದ ಪ್ರಥಮ ಚಿಕಿತ್ಸಾ ತರಬೇತಿಯನ್ನು ದಿ.29ರ ಬೆಳಗ್ಗೆ 10.30ಕ್ಕೆ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಸಾಯಿನಾಥ್ ಮಲ್ಲಿಗೆಮಾಡು ಅಧ್ಯಕ್ಷತೆ ವಹಿಸಲಿದ್ದಾರೆ. ಮೈವಿವಿ ರಾ.ಸೆ.ಯೋ ಸಂಯೋಜನಾಧಿಕಾರಿ ಡಾ.ಬಿ.ಚಂದ್ರಶೇಖರ ಉದ್ಗಾಟಿಸುವರು, ವೈದ್ಯಾಧಿಕಾರಿ ಡಾ.ಎಂ.ಜಿ.ನರಹರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್ ಹಾಗೂ ಇತರರು ಹಾಜರಿರುವರು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: