ಪ್ರಮುಖ ಸುದ್ದಿಮೈಸೂರು

ಸಮಗ್ರ ಕರ್ನಾಟಕ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಕಾರ್ಯಕರ್ತರು ಜನಸಾಮಾನ್ಯರಿಗೆ ತಲುಪಿಸಲು ಶ್ರಮಿಸಿ : ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಮೈಸೂರು,ಆ.29:-  ಸಮಗ್ರ ಕರ್ನಾಟಕ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕಾಗಿದೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದರು.

ಅವರು ನಿನ್ನೆ ಮೈಸೂರಿನ ಬಿಜೆಪಿ ಪಕ್ಷದ ಕಛೇರಿಗೆ ಭೇಟಿ ನೀಡಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು. ನಾನು ಸಾಮಾನ್ಯ ಕಾರ್ಯಕರ್ತನಾಗಿ ಈ ಮಟ್ಟಕ್ಕೆ ಬಂದಿದ್ದೇನೆ. ರಾಜ್ಯಾದ್ಯಂತ ತಳಮಟ್ಟದಿಂದ ಪಕ್ಷವನ್ನು ಬಲಪಡಿಸಲು ಮೈಸೂರು ಜಿಲ್ಲೆ ಕಾರ್ಯ ಕರ್ತರ ಬೆಂಬಲಬೇಕು. ರಾಜ್ಯದಲ್ಲಿ ಬಿ.ಎಸ್.ಯಡಿ ಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ತಿಂಗಳ ಹಿಂದೆ ಅಸ್ತಿತ್ವಕ್ಕೆ ಬಂದಿದೆ. ಇದರಿಂದ ಮುಂದಿನ ಚುನಾ ವಣೆಗೆ ಪಕ್ಷವನ್ನು ಸಂಘಟಿ ಸಲು ಅನುಕೂಲವಾಗಲಿದೆ. ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಕಳೆದ 5 ವರ್ಷ ಗಳಿಂದ ದೇಶದ ಅಭಿವೃದ್ಧಿ ಶರವೇಗದಲ್ಲಿ ಸಾಗುತ್ತಿದೆ. ಮುಂಬರುವ ವಿಧಾನಸಭಾ ಚುನಾ ವಣೆಯಲ್ಲಿ 150 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕಿದೆ. ಅದಕ್ಕಾಗಿ ಈಗಿನಿಂದಲೇ ಕಾರ್ಯಕರ್ತರು ತಳ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ರಾಜ್ಯ ಮತ್ತು ಕೇಂದ್ರದಲ್ಲಿ ಪಕ್ಷ ಅಧಿಕಾರದಲ್ಲಿರುವ ವಿಶಿಷ್ಟ ಸಂದರ್ಭದಲ್ಲಿ ಪಕ್ಷದ ಚುಕ್ಕಾಣಿ ಹಿಡಿದಿದ್ದೇನೆ. ಈ ಸಂದರ್ಭವನ್ನು ಉಪಯೋಗಿಸಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಸವಾಲು ನನ್ನ ಮೇಲಿದ್ದು, ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಪಕ್ಷ ಹಾಗೂ ಸರ್ಕಾರದ ಕೊಂಡಿಯಾಗಿ ಕೆಲಸ ಮಾಡಬೇಕಾಗಿದೆ ಎಂದರು. ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಮಾಡಿ ಪಕ್ಷ ಬಲಪಡಿಸಬೇಕಿರುವುದರಿಂದ ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲು ಬಂದಿದ್ದೇನೆ. ನಂತರ ಸುತ್ತೂರು ಮಠಾಧೀಶರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ ಅವರ ಆಶೀರ್ವಾದ ಪಡೆದಿರುವುದು ಪಕ್ಷದ ಬಲವರ್ದನೆಗೆ ಮತ್ತಷ್ಟು ಶಕ್ತಿ ತುಂಬಲಿದೆ ಎಂದಿದ್ದು, ಭೇಟಿ ನೀಡಿದ್ದಾರೆ.

ಮೈಸೂರಿಗೆ ಆಗಮಿಸಿದ ಅವರಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಈ ಸಂದರ್ಭ ಬಿಜೆಪಿ ನಗರಾಧ್ಯಕ್ಷ ಡಾ.ಮಂಜುನಾಥ್  ಬಿ.ಹೆಚ್.ಸಂಸದ ಪ್ರತಾಪ್  ಸಿಂಹ,  ಶಾಸಕರಾದ ಎಲ್.ನಾಗೇಂದ್ರ, ನಿರಂಜನ್‍ಕುಮಾರ್, ಮೈಸೂರು ಜಿಲ್ಲಾಧ್ಯಕ್ಷ ಎಂ.ಶಿವಣ್ಣ,   ಹೆಚ್.ವಿ.ರಾಜೀವ್, ಮಾಜಿ ಶಾಸಕ ಗೋ.ಮಧುಸೂಧನ್, ಸಂದೇಶ್‍ಸ್ವಾಮಿ, ರಾಜೇಂದ್ರ, ಅರುಣ್ ಕುಮಾರ್ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: