ಮೈಸೂರು

 ಕರಾಮುವಿ :  ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು,ಆ.30:- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ  ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐ.ಎ.ಎಸ್, ಐ.ಪಿ.ಎಸ್, ಪರೀಕ್ಷೆಗೆ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ  ಕೆ.ಎ.ಎಸ್ ಮತ್ತು ಇತರ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ತರಬೇತಿಯನ್ನು ನೀಡಲು ನಿರ್ಧರಿಸಲಾಗಿದೆ.

ಆಸಕ್ತರು 14.09.2019 ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ ದ ಕಛೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ರಮೇಶ್ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ. (ಎಸ್.ಎಚ್)

Leave a Reply

comments

Related Articles

error: