ಮೈಸೂರು

ಕಾಡಾ ಕಚೇರಿಯ ನೂತನ ಅಧ್ಯಕ್ಷರಾಗಿ ಹೆಚ್.ಎಸ್.ನಂಜಪ್ಪ ಅಧಿಕಾರ ಸ್ವೀಕಾರ

ಮೈಸೂರಿನ ಕಾಡಾ ಕಚೇರಿಯ ನೂತನ ಅಧ್ಯಕ್ಷರಾಗಿ ಹೆಚ್.ಎಸ್. ನಂಜಪ್ಪ ಅವರು ಅಧಿಕಾರ ಸ್ವೀಕರಿಸಿದರು. ಬಳಿಕ ಮುಂದಿನ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ಕಾಡಾ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಚೇರಿಯ ಅಧ್ಯಕ್ಷ ಹೆಚ್.ಎಸ್. ನಂಜಪ್ಪ ಅವರನ್ನು  ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಶಂಕರ್ ಹೂಗುಚ್ಛ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು ಮೊದಲಿನವರು ಯಾವ ರೀತಿ ಕಾರ್ಯ ನಿರ್ವಹಿಸಿಕೊಂಡು ಹೋಗುತ್ತಿದ್ದರೋ ಅದಕ್ಕಿಂತಲೂ ಹೆಚ್ಚಿನ ಶ್ರಮ ವಹಿಸಿ ಕಾರ್ಯ ನಿರ್ವಹಿಸಲು ಪ್ರಯತ್ನಿಸುತ್ತೇನೆ. ಅದಕ್ಕೆ ನಿಮ್ಮ ಸಹಾಯ, ಸಹಕಾರ ಅತ್ಯಗತ್ಯ ಎಂದರು. ನಂತರ ಸಭೆ ನಡೆಸಿದ ಅವರು ಅಚ್ಚುಕಟ್ಟು ಪ್ರದೇಶದಲ್ಲಿ ಮಾರುಕಟ್ಟೆ ಧಾನ್ಯ ಸಂಸ್ಕರಣೆ ಮತ್ತು ಅಗತ್ಯ ಶೇಖರಣಾ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು. ರೈತರುಗಳಿಗೆ ಹಾಗೂ ಗ್ರಾಮೀಣ ಕುಶಲಕರ್ಮಿಗಳಿಗೆ ಸಾಲಸೌಲಭ್ಯ ಒದಗಿಸಲಾಗುವುದು. ಪ್ರಾಧಿಕಾರದ ಉದ್ದೇಶ ನಿರ್ವಹಣೆಗಾಗಿ ಸಾಂಸ್ಥಿಕ ಸಾಲದ ಸೌಲಭ್ಯ ಕಲ್ಪಿಸಲಾಗುವುದು ಎಂದರು.

ಮೊದಲು ಇಲ್ಲಿ ದಾಸೇಗೌಡರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರ ಬಳಿಕ ಹೆಚ್.ಎಸ್. ನಂಜಪ್ಪ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

Leave a Reply

comments

Related Articles

error: