ಮೈಸೂರು

ಪರಿಸರ ಸ್ನೇಹಿ ಗಣಪತಿ-ಗೌರಮ್ಮ ಉಚಿತ ವಿತರಣೆ ನಾಳೆ

ಮೈಸೂರು,ಆ.31 : ಅರಿವು ಸಂಸ್ಥೆಯಿಂದ ಪರಿಸರ ಸ್ನೇಹಿ ಮಣ್ಣಿನ ಗಣಪತಿ ಹಾಗೂ ಗೌರಮ್ಮ ಉಚಿತ ವಿತರಣೆ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮವನ್ನು ಸೆ.1ರಂದು ಬೆಳಗ್ಗೆ 10.30ಕ್ಕೆ ಚಾಮುಂಡಿಪುರಂನ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಶ್ರೀ ಇಳೈ ಆಳ್ವಾರ್ ಸ್ವಾಮೀಜಿ, ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ, ಕಸಾಪ ಅಧ್ಯಕ್ಷ ವೈ.ಡಿ.ರಾಜಣ್ಣ, ಪಾಲಿಕೆ ಸದಸ್ಯ ಮಾ.ವಿ.ರಾಂಪ್ರಸಾದ್, ಅಕ್ಷಯ ಆಹಾರ ಪೌಂಡೇಷನ್ ಅಧ್ಯಕ್ಷ ರಾಜೇಂದ್ರ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಅರಿವು ಅಧ್ಯಕ್ಷ ಶ್ರೀಕಾಂತ್ ಕಶ್ಯಪ್ ಮೊದಲಾದವರು ಹಾಜರಿರಲಿದ್ದಾರೆ ಎಂದು ಅರಿವು ಸಂಸ್ಥೆ ಪ್ರಧಾನ ಕಾರ್ಯದರ್ಶಿ ಮಹೇಶ್ ಕುಮಾರ್ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: