ಮೈಸೂರು

ಹಂಚ್ಯಾ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ

ಮೈಸೂರು ತಾಲ್ಲೂಕಿನ ಹಂಚ್ಯಾಗ್ರಾಮದಲ್ಲಿ ತಾಲ್ಲೂಕು ಪಂಚಾಯತ್ ವತಿಯಿಂದ ರಸ್ತೆ ಕಾಮಗಾರಿಗಾಗಿ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಇತ್ತೀಚೆಗೆ  ಜಿಲ್ಲಾ ಪಂಚಾಯತ್ ಸದಸ್ಯ ಜಿ.ಮಾದೇಗೌಡ ಕಾಮಗಾರಿಗೆ ಚಾಲನೆ ನೀಡಿದರು.  ಸುಮಾರು 1.50 ಲಕ್ಷ ರೂಪಾಯಿ ವೆಚ್ಚದಲ್ಲಿ ಶಾಲೆಯ ಮುಂದಿನ ರಸ್ತೆಯನ್ನು ಅಭಿವೃದ್ಧಿಪಡಿಸುವ ಕಾಮಗಾರಿಯನ್ನು ಆರಂಭಿಸಲಾಯಿತು.

ತಾಲ್ಲೂಕು ಪಂಚಾಯತ್ ಸದಸ್ಯ ಪುಟ್ಟತಾಯಮ್ಮ ತಮ್ಮೇಗೌಡ, ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರಸ್ವಾಮಿ, ಸದಸ್ಯರಾದ ಮಂಜು, ಚೆನ್ನಯ್ಯ, ಬಸವರಾಜು, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸ್ವಾಮಿ, ಸ್ವಾಮಿ ಗೌಡ , ಮುಖಂಡರಾದ ಹೆಚ್.ಆರ್.ಮಹದೇವು, ಶ್ರೀನಿವಾಸ ಗೌಡ, ಕೆಂಪೇಗೌಡ ಹಾಗೂ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Leave a Reply

comments

Related Articles

error: