ಮೈಸೂರು

ದಸರಾ ಉತ್ಸವ: ಅಕ್ಟೋಬರ್ 7ರಿಂದ ಕವಿಗೋಷ್ಠಿ ಆರಂಭ

ನಾಡ ಹಬ್ಬ ದಸರಾಕ್ಕೆ ಇನ್ನು ಕೇವಲ ಆರು ದಿನಗಳು ಮಾತ್ರ ಬಾಕಿ ಉಳಿದಿವೆ. ದಸರಾದ ಮುಖ್ಯ ಆಕರ್ಷಣೆಯಲ್ಲಿ ಕವಿಗೋಷ್ಠಿಯು ಒಂದು. ಈ ಬಾರಿಯ ಕವಿಗೋಷ್ಠಿಯಲ್ಲಿ ಮೂರು ಮಜಲುಗಳಿವೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಮಡಿಕೇರಿ ಜಿಲ್ಲೆಗಳ ವ್ಯಾಪ್ತಿಯ ಕವಿಗೋಷ್ಠಿಯೂ ಇದೆ.
ಸೆಪ್ಟೆಂಬರ್ 7ರಂದು ಬೆಳಿಗ್ಗೆ 10ಗಂಟೆಗೆ ಮಾನಸ ಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಉದ್ಘಾಟನೆ ನಡೆಯಲಿದ್ದು, ಕವಿ ಕೋಟಗಾನಹಳ್ಳಿ ರಾಮಯ್ಯ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಹಿರಿಯ ಸಾಹಿತಿ ಡಾ.ನಾ.ಮೊಗಸಾಲೆ, ಶಾಸಕ ವಾಸು, ಖ್ಯಾತ ಗೀತ ರಚನೆಕಾರ ಕೆ.ಕಲ್ಯಾಣ್ ಉಪಸ್ಥಿತರಿರುತ್ತಾರೆ.

11.30ರಿಂದ 1.30ರವರೆಗೆ ಚಿಗುರು, ಯುವ, ಮಹಿಳಾ ಕವಿಗೋಷ್ಠಿ ನಡೆಯಲಿದ್ದು, ಅಧ್ಯಕ್ಷತೆಯನ್ನು ಕವಿ ಆನಂದ ಝಂಜರವಾಡ ವಹಿಸಲಿದ್ದಾರೆ. ಮಧ್ಯಾಹ್ನ 2.30ರಿಂದ 5.30ರವರೆಗೆ ಕನ್ನಡ ಕಾವ್ಯ ಪರಂಪರೆ, ಗಮಕ ವಾಚನ ಮತ್ತು ವ್ಯಾಖ್ಯಾನವಿದ್ದು ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಸಾಹಿತಿ ಅಲ್ಲಮಪ್ರಭು ಬೆಟದೂರು ಆಶಯ ನುಡಿಗಳನ್ನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕವಿ ಡಾ.ಸರಸ್ವತಿ ಚಿಮ್ಮಲಗಿ ಭಾಗವಹಿಸಲಿದ್ದಾರೆ.
ಅಕ್ಟೋಬರ್ 8ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಜಗನ್ಮೋಹನ ಅರಮನೆಯಲ್ಲಿ ಪ್ರಧಾನ ಕವಿಗೋಷ್ಠಿ ನಡೆಯಲಿದ್ದು, ಕವಿ ಲಲಿತಾ ಸಿದ್ಧಬಸವಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಹಿರಿಯ ಸಾಹಿತಿ ಡಾ.ಹೆಚ್.ಎಸ್.ವೆಂಕಟೇಶ್ ಮೂರ್ತಿ ಅಧ್ಯಕ್ಷತೆಯಲ್ಲಿ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.

Leave a Reply

comments

Related Articles

error: