ಮೈಸೂರು

ಸುನಿಲ್ ಬೋಸ್ ಗೆ ಫೆ.27ರಂದು ಖುದ್ದು ಹಾಜರಾಗಲು ನ್ಯಾಯಾಲಯ ಆದೇಶ

ಅಕ್ರಮ ಮರಳುಗಾರಿಕೆಗೆ ಪರವಾನಗಿ ನೀಡಲು ಲಂಚ ಪಡೆಯುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗೆ ಲಂಚ ಪಡೆಯಲು ಪ್ರೇರೇಪಣೆ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಡಾ. ಎಚ್.ಸಿ ಮಹದೇವಪ್ಪನವರ ಪುತ್ರ ಸುನಿಲ್ ಬೋಸ್ ಗೆ ನ್ಯಾಯಾಲಯದಲ್ಲಿ ಮತ್ತೆ ಹಿನ್ನಡೆಯುಂಟಾಗಿದ್ದು, ಫೆ.27ರಂದು ಖುದ್ದು ಹಾಜರಾಗುವಂತೆ ಆದೇಶ ನೀಡಿದೆ.

ಫೆ.20ರಂದು  ಸುನಿಲ್ ಬೋಸ್ ಖುದ್ದು ಹಾಜರಾಗುವಂತೆ ಈ ಹಿಂದೆಯೇ ನ್ಯಾಯಾಲಯ ಆದೇಶಿಸಿತ್ತು. ಆದರೆ ಸುನಿಲ್ ಬೋಸ್ ಪರ ವಕೀಲರು ಖುದ್ದು ಹಾಜರಾತಿಗೆ ವಿನಾಯಿತಿ ನೀಡಬೇಕು ಎಂದು ಕೇಳಿಕೊಂಡಿದ್ದರು. ಪ್ರಕರಣದಲ್ಲಿ ಸುನಿಲ್ ಬೋಸ್ ವಿರುದ್ಧ ಸೂಕ್ತ  ಸಾಕ್ಷ್ಯಾಧಾರಗಳು  ಇಲ್ಲದ್ದರಿಂದ ಸುನಿಲ್ ಬೋಸ್ ಹೆಸರನ್ನು ಕೈ ಬಿಡುವಂತೆ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಲಾಗಿತ್ತು.

ಆದರೆ ಸದರಿ ಪ್ರಕರಣದಲ್ಲಿ ಸುನಿಲ್ ಬೋಸ್ ಹೆಸರು ಕೈಬಿಡಲು ನಿರಾಕರಿಸಿರುವ ನ್ಯಾಯಾಲಯ ಫೆ.27 ರಂದು ಖುದ್ದು ಹಾಜರಾಜಬೇಕೆಂದು ಆದೇಶ ನೀಡಿದೆ.

Leave a Reply

comments

Related Articles

error: