ಪ್ರಮುಖ ಸುದ್ದಿ

ಅಕ್ರಮ ಹಣ ವರ್ಗಾವಣೆ ಪ್ರಕರಣ : ಇಡಿ ಅಧಿಕಾರಿಗಳಿಂದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ

ದೇಶ( ನವದೆಹಲಿ)ಸೆ.4:-  ಅಕ್ರಮ ಹಣ ವರ್ಗಾವಣೆ ಪ್ರಕರಣ ಕುರಿತಂತೆ ಸತತ ನಾಲ್ಕು ದಿನಗಳಿಂದ ವಿಚಾರಣೆ ನಡೆಸಿದ್ದ ಇಡಿ ಕೊನೆಗೂ ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಅವರನ್ನು ಬಂಧಿಸಿದೆ. ಗಣೇಶ ಹಬ್ಬ ಇದ್ದರೂ ಬಿಡುವು ನೀಡದ ಇಡಿ ಅಧಿಕಾರಿಗಳು ನವ ದೆಹಲಿಯಲ್ಲಿ ಬಂಧಿಸಿದ್ದಾರೆ.

ಇಡಿ ಅಧಿಕಾರಿಗಳು ಡಿಕೆಶಿ ಬಂಧಿಸಿ, ಆರ್​ಎಂಎಲ್​ ಆಸ್ಪತ್ರೆಗೆ ದಾಖಲಿಸಿ, ಮೆಡಿಕಲ್​ ಚಕ್​ ಅಪ್​ ನಡೆಸಲಾಗಿದೆ. ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಕಳೆದ 4 ದಿನಗಳಿಂದ ದೆಹಲಿಯ ಜಾರಿ ನಿರ್ದೇಶನಾಲಯ ಆಫೀಸ್​​ನಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್​ ಅವರನ್ನ ಅಧಿಕಾರಿಗಳು ಸತತ ವಿಚಾರಣೆ ನಡೆಸಿದ್ದರು. ಆದರೆ, ವಿಚಾರಣೆಗೆ ಡಿ.ಕೆ. ಶಿವಕುಮಾರ್​ ಸರಿಯಾಗಿ ಸಹಕರಿಸಿಲ್ಲ ಎಂಬ ಕಾರಣ ನೀಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಬಂಧನದ ಹಿನ್ನೆಲೆಯಲ್ಲಿ ಇ.ಡಿ. ಕಚೇರಿಯಲ್ಲಿ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ.

ಡಿಕೆಶಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಅಥವಾ ನ್ಯಾಯಾಧೀಶರ ಮನೆಯಲ್ಲಿ ಹಾಜರುಪಡಿಸಲಿದೆ.

ಈ ನಡುವೆ ಜಾರಿ ನಿರ್ದೇಶನಾಲಯ ಕಚೇರಿ ಎದುರು ಡಿಕೆಶಿ ಬೆಂಬಲಿಗರು, ಕಾಂಗ್ರೆಸ್​ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರು. ಕಾರು ಹೋಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

ಪ್ರಕರಣದ ಹಿನ್ನೆಲೆ 
2017ರ ಆಗಸ್ಟ್ 2 ರಂದು ನವದೆಹಲಿಯ ಡಿಕೆ ಶಿವಕುಮಾರ್ ಆಪ್ತರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ವೇಳೆ, ದಾಖಲೆ ಇಲ್ಲದ 8.59 ಕೋಟಿ ರೂ. ಹಣ ಪತ್ತೆಯಾಗಿತ್ತು. ಈ ಸಂಬಂಧ ಐಟಿ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಡಿಕೆಶಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: