ಸುದ್ದಿ ಸಂಕ್ಷಿಪ್ತ

ಶಿಕ್ಷಕರ ದಿನಾಚರಣೆ : ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

ಮಡಿಕೇರಿ ಸೆ.4 :-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವು ಸೆ.5 ರಂದು ಬೆಳಗ್ಗೆ 10 ಗಂಟೆಗೆ ನಗರದ ಸಂತ ಜೋಸೆಫರ ಶಾಲೆಯಲ್ಲಿ ನಡೆಯಲಿದೆ.
ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ನೆಲ್ಲಚಂಡ ಕಿರಣ್ ಕಾರ್ಯಪ್ಪ, ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್, ಆರ್.ಆರ್. ಆಸ್ಪತ್ರೆಯ ಮಕ್ಕಳ ತಜ್ಞರಾದ ಬಿ.ಸಿ.ನವೀನ್ ಕುಮಾರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪೆನ್ನೇಕರ್ ಇತರರು ಪಾಲ್ಗೊಳ್ಳಲಿದ್ದಾರೆ.(ಕೆಸಿಐ,ಎಸ್.ಎಚ್)

Leave a Reply

comments

Related Articles

error: