ದೇಶಪ್ರಮುಖ ಸುದ್ದಿ

ಏರ್ ಸೆಲ್ -ಮ್ಯಾಕ್ಸಿಸ್ ಹಗರಣ: ಕಾರ್ತಿ ಚಿದಂಬರಂಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು

ನವದೆಹಲಿ,ಸೆ.5- ಏರ್ ಸೆಲ್ -ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ದೆಹಲಿಯ ಅವೆನ್ಯೂ ಕೋರ್ಟ್ ಒಂದು ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಮತ್ತು ಅದೇ ಮೊತ್ತದ ಭದ್ರತೆಯ ಮೇಲೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ. ಹೀಗಾಗಿ ಇದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದೇವೆ. ಯಾವಾಗ ವಿಚಾರಣೆಗೆ ಬೇಕೋ ಆ ಸಂದರ್ಭದಲ್ಲಿ ತನಿಖಾ ಸಂಸ್ಥೆಗೆ ಲಭ್ಯರಾಗಬೇಕು ಎಂದು ನಿರ್ದೇಶನ ನೀಡಿದೆ. ಅಲ್ಲದೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ಸಾಕ್ಷ್ಯವನ್ನು ನಾಶ ಮಾಡಬಾರದು. ಅನುಮತಿ ಇಲ್ಲದೆ ದೇಶ ಬಿಟ್ಟುಹೋಗುವಂತಿಲ್ಲ ಎಂದು ಕೋರ್ಟ್ ಷರತ್ತು ವಿಧಿಸಿದೆ.

ಏರ್ ಸೆಲ್ -ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಮತ್ತೊಂದೆಡೆ ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿ.ಚಿದಂಬರಂಗೆ ಇ.ಡಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. (ಎಂ.ಎನ್)

Leave a Reply

comments

Related Articles

error: