ಪ್ರಮುಖ ಸುದ್ದಿ

ನಳಿನ್ ಕುಮಾರ್ ಕಟೀಲ್ ಗೆ ರಾಜಕೀಯ ಜ್ಞಾನವೂ ಇಲ್ಲ,ಯಾಕೆ ಅಧ್ಯಕ್ಷರನ್ನಾಗಿ ಮಾಡಿದ್ದಾರೋ ಗೊತ್ತಿಲ್ಲ : ಟಾಂಗ್ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಜ್ಯ(ಬೆಂಗಳೂರು)ಸೆ.9:-  ಡಿಕೆ ಶಿವಕುಮಾರ್ ಜೈಲಿಗೆ ಹೋಗಲು ಸಿದ್ದರಾಮಯ್ಯ ಕಾರಣ ಅನ್ನೋ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಯವರು ನಳಿನ್ ಕುಮಾರ್ ಕಟೀಲ್ ಅವರನ್ನು ಯಾಕೆ ಅಧ್ಯಕ್ಷರನ್ನಾಗಿ ಮಾಡಿದ್ದಾರೋ ಗೊತ್ತಿಲ್ಲ. ಅವರಿಗೆ ಕನಿಷ್ಠ ಜ್ಞಾನ ಅಲ್ಲದೆ ರಾಜಕೀಯ ಜ್ಞಾನವೂ ಇಲ್ಲ ಎಂದು ಟಾಂಗ್ ನೀಡಿದ್ದಾರೆ.

ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಳಿನ್ ಕುಮಾರ್ ಗೆ ಕನಿಷ್ಠ ಜ್ಞಾನ ಇಲ್ಲ. ಇಡಿ, ಐಟಿ, ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿ ಇರುತ್ತದೆ. ಈಗ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿ ಇದೆ. ಬಿಜೆಪಿಯವರು ಇಂತಹ ಹೇಳಿಕೆ ಕೊಟ್ಟು ರಾಜಕೀಯವಾಗಿ ಬೆಂಕಿ ಹಚ್ಚೋ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿಯವರು ಯಾಕೆ ನಳಿನ್ ಕುಮಾರ್ ನನ್ನು ಅಧ್ಯಕ್ಷರಾಗಿ ಮಾಡಿದ್ದಾರೋ ಗೊತ್ತಿಲ್ಲ. ಕನಿಷ್ಠ ಜ್ಞಾನ ಅವರಿಗೆ ಇಲ್ಲ. ಅಲ್ಲದೆ ರಾಜಕೀಯ ಜ್ಞಾನವೂ ಇಲ್ಲ. ಕರ್ನಾಟಕದ ರಾಜಕೀಯದ ಬಗ್ಗೆಯೂ ಗೊತ್ತಿಲ್ಲ. ಇದು ರಾಜಕೀಯ ಪ್ರೇರಿತ ಹೇಳಿಕೆ ಅಷ್ಟೇ. ಈ ಹೇಳಿಕೆ ದುರುದ್ದೇಶದಿಂದ ಕೂಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: