ದೇಶಪ್ರಮುಖ ಸುದ್ದಿ

ಮಹತ್ವದ ಕಾರ್ಯಾಚರಣೆಯಲ್ಲಿ 8 ಮಂದಿ ಪಾಕಿಸ್ತಾನ ಮೂಲದ ಉಗ್ರರನ್ನು ಬಂಧಿಸಿದ ಕಾಶ್ಮೀರಿ ಪೊಲೀಸರು

ದೇಶ(ಶ್ರೀನಗರ)ಸೆ.10:-  ಪಾಕಿಸ್ತಾನ ಮೂಲದ 8 ಮಂದಿ ಉಗ್ರರು ಭಾರತದಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದು, ಮಹತ್ವದ ಕಾರ್ಯಾಚರಣೆಯಲ್ಲಿ ಅವರನ್ನು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಉಗ್ರರು ಕಣಿವೆ ರಾಜ್ಯದ ವ್ಯಾಪಾರಿಗಳಿಗೆ ಅಂಗಡಿ ಮುಂಗಟ್ಟು ತೆರೆಯದಂತೆ ಬೆದರಿಕೆ ಹಾಕುತ್ತಿದ್ದರು. ಅಲ್ಲದೆ, ವಾಣಿಜ್ಯ ಸಂಕೀರ್ಣಗಳು ಮುಚ್ಚಿಯೇ ಇರಬೇಕೆಂದು ಕರಪತ್ರಗಳನ್ನೂ ಹಂಚುತ್ತಿದ್ದರು. ಕಳೆದ ವಾರ ಮನೆಯೊಂದರ ಮೇಲೆ ನಡೆದ ದಾಳಿಯ ಹಿಂದೆ ಈ ಉಗ್ರರದ್ದೇ ಕೈವಾಡವಿರುವ ಶಂಕೆಯಿದೆ ಎಂದು ಪೊಲೀಸರು ಹೇಳಿದ್ದಾರೆ.

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಭಾರತದ ವಿರುದ್ಧ ಪದೇ ಪದೇ ಪಾಕಿಸ್ತಾನ ಕಾಲು ಕೆರೆಯುತ್ತಿದ್ದು, ಇದೀಗ ತನ್ನ ಸೇನೆ, ಗುಪ್ತಚರ ಸಂಸ್ಥೆ ಐಎಸ್ಐ ಮತ್ತು ಪಾಕ್ ಕೃಪಾಪೋಷಿತ ಉಗ್ರರನ್ನು ಭಾರತದ ಮೇಲೆ ಛೂ ಬಿಟ್ಟಿದ್ದು, ಭಾರತದಲ್ಲಿ ವಿಧ್ವಂಸಕ ದಾಳಿ ಮಾಡಲು ಸಂಚು ರೂಪಿಸಿದ್ದ 8 ಮಂದಿ ಉಗ್ರರನ್ನು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದಿದ್ದಾರೆ. (ಎಸ್.ಎಚ್)

Leave a Reply

comments

Related Articles

error: