ಪ್ರಮುಖ ಸುದ್ದಿಮೈಸೂರು

ಸೆ.12ರಂದು ಸಿರಿವಾಹಿನಿ ಮೂರನೇ ವಾರ್ಷಿಕೋತ್ಸವ : ವೆಬ್ ಸೈಟ್ ಚಾಲನೆ

ಮೈಸೂರು,ಸೆ.10 : ಸಿರಿ ವಾಹಿನಿಯ 3ನೇ ವರ್ಷದ ವಾರ್ಷಿಕೋತ್ಸವವನ್ನು ಸೆಪ್ಟೆಂಬರ್ 12 ರ ಸಂಜೆ 5 ಗಂಟೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿರಿ ಟಿವಿ ಸಂಸ್ಥಾಪಕರಾದ ಡಾ. ರವಿಯವರು ತಿಳಿಸಿದರು.

ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಿರಿ ಚಾನಲ್ ನ ವಾರ್ಷಿಕೋತ್ಸವ ಸಮಾರಂಭವನ್ನು, ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಕಿಶನ್ ರೆಡ್ಡಿ ಯವರು ಉದ್ಘಾಟಿಸುವರು, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸಿರಿ ಟಿವಿಯ ವೆಬ್ ಸೈಟ್ ಅನಾವರಗೊಳಿಸಲಿದ್ದಾರೆ, ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವ ಪ್ರಷೋತ್ತಮ್ ರೂಪಾಲ, ಬಿಜೆಪಿಯ ರಾಷ್ಟ್ರೀಯ ವಕ್ತಾರರಾದ ಕೇಂದ್ರದ ಮಾಜಿ ಸಚಿವ ಸೈಯದ್ ಶಹನವಾಜ್ ಹುಸೇನ್ , ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ, ಆರೋಗ್ಯ ಸಚಿವ ಶ್ರೀರಾಮುಲು, ಸಂಸದ ಪ್ರತಾಪ್ ಸಿಂಹ , ಮೇಯರ್ ಪುಷ್ಪಲತಾ ಜಗನ್ನಾಥ್ ಸೇರಿದಂತೆ ಸ್ಥಳೀಯ ಶಾಸಕರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ, ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಎಲ್ ನಾಗೇಂದ್ರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ , ಇವರ ಜೊತೆಗೆ ಖ್ಯಾತ ಚಲನಚಿತ್ರ ನಟ ನಟಿಯರು ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ ಎಂದು ತಿಳಿಸಿದರು.

ಉದ್ಘಾಟನಾ ಸಮಾರಂಭದ ನಂತರ ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕ ಹಾಗೂ ನಟ ರಾಜೇಶ್ ಕೃಷ್ಣನ್ ಮತ್ತು ಸರಿಗಮಪ ತಂಡದವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಸುದ್ದಿಗೋಷಿಯಲ್ಲಿ ರಂಗಸ್ವಾಮಿ, ಪಾರ್ಥಸಾರಥಿ, ನಂಜುಂಡಸ್ವಾಮಿ ಉಪಸ್ಥಿತರಿದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: