ಪ್ರಮುಖ ಸುದ್ದಿ

ಸರ್ಕಾರಿ ಶಾಲೆಯ ಮಕ್ಕಳಿಗೆ ಮೇಷ್ಟ್ರಾಗಿ ಪಾಠ  ಮಾಡಿದ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ.ಚನ್ನಣ್ಣನವರ್

ರಾಜ್ಯ(ನೆಲಮಂಗಲ)ಸೆ.10:-  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣನವರ್ ಶಾಲಾ ಮಕ್ಕಳಿಗೆ ಪಾಠ – ಪ್ರವಚನ ಮಾಡಿದ್ದಾರೆ.

ನೆಲಮಂಗಲ ತಾಲೂಕಿನ ಕಾಚನಹಳ್ಳಿಯಲ್ಲಿ    ದಲಿತರು ಡಂಗೂರ ಸಾರುವ ವಿಚಾರಕ್ಕೆ ಸವರ್ಣೀಯರು ಮತ್ತು ದಲಿತರ ನಡುವೆ ಮಾರಾಮಾರಿ ನಡೆದಿತ್ತು. ಈ ಹಿನ್ನೆಲೆ  ಕಾಚನಹಳ್ಳಿ ಗ್ರಾಮಕ್ಕೆ ಪ್ರಕರಣ ವಿಚಾರಣೆಗೆಂದು ಆಗಮಿಸಿದ್ದ ರವಿ ಚೆನ್ನಣ್ಣನವರ್ ಪಕ್ಕದಲ್ಲೇ ಇದ್ದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಪಾಠ ಮಾಡಿದ್ದಾರೆ. ಏಳನೇ ತರಗತಿ ಮಕ್ಕಳಿಗೆ ಸಾಮಾನ್ಯ ಪ್ರಶ್ನೆಗಳನ್ನು ಕೇಳಿ,  ನಾನೂ ಕೂಡ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾಗಿ ಮಕ್ಕಳಿಗೆ ತಿಳಿಸಿದರು, ವಿದ್ಯೆ ಮನುಷ್ಯನ ಆಸ್ತಿ ಯಾರೂ ಸಹ ಅದನ್ನು ಕದಿಯಲು ಸಾಧ್ಯವಿಲ್ಲ. ಹಾಗಾಗಿ ಎಲ್ಲಾ ಮಕ್ಕಳು ವಿದ್ಯಾವಂತರಾಗಬೇಕು  ಎಂದು ಹೇಳಿದರು. ಹಾಗೆಯೇ ಇಲ್ಲಿ ಯಾರು ಮೇಲು ಅಲ್ಲ, ಕೀಳು ಅಲ್ಲ. ಭಾರತಕ್ಕೆ ಸಂವಿಧಾನದ ಕೊಟ್ಟ ಅಂಬೇಡ್ಕರ್ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂದು ಹೇಳಿದ್ದಾರೆ. ಹಾಗೆಯೇ ನಮ್ಮ ಪ್ರಧಾನಿ ನರೇಂದ್ರ ಮೋದಿ ಸಬ್ ಕಾ ಸತ್ ಸಬ್ ಕಾ ವಿಕಾಸ್ ಎಂದು ಹೇಳಿದ್ದಾರೆಂದು ಮಕ್ಕಳಿಗೆ ನೀತಿ ಬೋಧನೆ ಮಾಡಿದರು. ಸರ್ಕಾರಿ ಶಾಲೆಗೆ  ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣನವರ್ ಭೇಟಿ ನೀಡಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: