ಮೈಸೂರು

ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ಕಾರ್ಮಿಕ ಇಲಾಖೆ ಬಾಲವಾಡಿ ಕಾರ್ಯಕರ್ತರಿಗೆ ಕನಿಷ್ಟ ವೇತನ ನಿಗದಿಪಡಿಸುವಂತೆ ಆದೇಶ ನೀಡಿ 6 ತಿಂಗಳಾದರೂ ಇದಕ್ಕೆ ಸಂಬಂಧಪಟ್ಟವರು ಯಾವುದೇ ಕ್ರಮಕೈಗೊಂಡಿಲ್ಲ. ಬಾಲವಾಡಿ ಕಾರ್ಯಕರ್ತೆಯರಿಗೆ ದೊರಕಬೇಕಾದ ಕನಿಷ್ಠ ವೇತನವನ್ನು ದೊರಕಿಸಿಕೊಡಿ ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಆಯಾಗಳ ಸಂಘದ ವತಿಯಿಂದ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಹೆಚ್.ಡಿ.ಕೋಟೆ, ಟಿ.ನರಸೀಪುರ ಹಾಗೂ ಮೈಸೂರಿನ ಕೆಲ ಭಾಗಗಳಲ್ಲಿ ಕನಿಷ್ಟ ವೇತನ ನಿಗದಿಯಾಗಿದ್ದರೂ ಮೈಸೂರು ಸೇರಿದಂತೆ ಪಿರಿಯಾಪಟ್ಟಣ, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಕನಿಷ್ಟ ವೇತನವನ್ನು ಜಾರಿಗೊಳಿಸಿಲ್ಲ. ಕೂಡಲೇ ಸಂಬಂಧಪಟ್ಟವರು ಈ ಕುರಿತು ಗಮನ ಹರಿಸಿ ಕನಿಷ್ಠ ವೇತನ ಮತ್ತು ಪಿಂಚಣಿಯನ್ನು ಒದಗಿಸಿಕೊಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ಎಂ.ಮಹೇಶ್‍ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಚೌಡಮ್ಮ ಹಾಗೂ ಗೌರಮ್ಮ ಸುಶೀಲಮ್ಮ ಮಾನ್ವಿ, ನೀಲಮ್ಮ, ಮರಿಯಮ್ಮ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Leave a Reply

comments

Related Articles

error: